ಬೆಂಗಳೂರು: ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಆಗ್ರಹಿಸಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಅವರು, ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ. ಹಳ್ಳಿಜನರು, ರೈತರು ಹಾಗೂ ಹೊಟೇಲ್‌ಗಳಿಗೆ ಸೌದೆ ಒಲೆ ಬಳಸಲು, ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಇರಾನ್ ದಾಳಿಗೆ ಹೊತ್ತಿ ಉರಿದ ಅಮೆರಿಕದ ಟ್ಯಾಂಕರ್
ಈ ಇಂಧನ ಬೆಲೆ ಏರಿಕೆಯಿಂದ ಜನ ಪರದಾಡುತ್ತಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಹೊಣೆ. ಕೇಂದ್ರ ಸರ್ಕಾರ ವಿದೇಶಾಂಗ ನೀತಿ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಿಲ್ಲ. ಈ ವಿಚಾರದಲ್ಲಿ ಕೇಂದ್ರದ ಧೋರಣೆ ಖಂಡನೀಯ. ನಾಗರಿಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಮುಂದೆ ಪರಿಸ್ಥಿತಿ ಹೇಗಿರುತ್ತದೆಯೋ ಹೇಗೋ ಈಗಾಗಲೇ ಗ್ಯಾಸ್ ಚಾಲಿತ ಆಟೋ ಬಂದ್ ಆಗಿದ್ದು, ಸಮಸ್ಯೆ ಹೆಚ್ಚುತ್ತಿದೆ ಎಂದು ತಿಳಿಸಿದ್ದಾರೆ.

