ಬೆಂಗಳೂರು: ಇರಾನ್ – ಇಸ್ರೇಲ್ ಯುದ್ಧದ (Iran-Israel war) ಪರಿಣಾಮದಿಂದ ಐಟಿ ಬಿಟಿ (IT BT) ವಲಯಕ್ಕೂ ಗ್ಯಾಸ್ ಸಿಲಿಂಡರ್ ಅಭಾವದ ಬಿಸಿ ತಟ್ಟಿದೆ. ಪರಿಸ್ಥಿತಿ ಕೈ ಮೀರಿದ್ರೆ ವರ್ಕ್ ಫ್ರಂ ಹೋಮ್ ಬಗ್ಗೆ ಚಿಂತನೆ ಮಾಡಲಾಗಿದೆ ಎನ್ನಲಾಗುತ್ತಿದೆ. ಗ್ಯಾಸ್ ಸಿಲಿಂಡರ್ ಸಂಪೂರ್ಣ ಸ್ಟಾಕ್ ಕೈ ಕೊಟ್ಟರೆ ವರ್ಕ್ ಫ್ರಂ ಹೋಂಗೆ (Work From Home) ಸಿಬ್ಬಂದಿಗೆ ಸೂಚನೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಈಗಾಗಲೇ ಕ್ಯಾಟರಿಂಗ್ ಹಾಗೂ ಹೋಟೆಲ್ಗಳಿಗೆ ಗ್ಯಾಸ್ ಸಿಲಿಂಡರ್ ಅಭಾವದ ಬಿಸಿ ತಟ್ಟಿದೆ. ಹೀಗಾಗಿ ರಾಜ್ಯದ ಹಲವೆಡೆ ಮೆನು ಕಡಿತಕ್ಕೆ ನಿರ್ಧರಿಸಲಾಗಿದೆ. ವೆರೈಟಿ ಐಟಂಗಳಿಗೆ ಕೋಕ್ ನೀಡಲಾಗಿದೆ. ಲಿಮಿಟೆಡ್ ಐಟಂಗಳನ್ನು ಮಾತ್ರ ನೀಡಲು ಹೋಟೆಲ್ಗಳು ಮುಂದಾಗಿವೆ. ಇದನ್ನೂ ಓದಿ: ಬೆಂಗಳೂರಲ್ಲಿ LPG ದಾಸ್ತಾನು ಕೊರತೆ ಇಲ್ಲ: ಡಿಸಿ ಸ್ಪಷ್ಟನೆ

ಇದರ ನಡುವೆಯೇ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳ (Domestic LPG Customers) ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ.ಜಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲವು ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಅನಿಲದ ಕೊರತೆ ಇಲ್ಲ. ಹೀಗಾಗಿ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಗೃಹಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದುಕೊರತೆಗಳು ಇದ್ದಲ್ಲಿ ಸಹಾಯವಾಣಿ: 9611404384 ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೋಟೆಲ್ನಲ್ಲಿ ಬ್ರೇಕ್ಫಾಸ್ಟ್ ಮಾಡಿದವರಿಗೆ 30 ರೂ. ಗ್ಯಾಸ್ ಸಪ್ಲೈ ಚಾರ್ಜ್ – ಗ್ರಾಹಕರ ಆಕ್ರೋಶ

