ಅಮರಾವತಿ: ಪತಿಯ (Husband) ಕಣ್ಣೆದುರಲ್ಲೇ ಪತ್ನಿ (Wife) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶ (Andhra Pradesh) ಕಡಪ ಜಿಲ್ಲೆಯ ಬೋಯಿನಪಲ್ಲಿ ಗ್ರಾಮದಲ್ಲಿ ನಡೆದಿದೆ.
ನೇಣಿಗೆ ಶರಣಾದ ಮಹಿಳೆಯನ್ನು ಕೃಷ್ಣವೇಣಿ ಎಂದು ಗುರುತಿಸಲಾಗಿದೆ. ಪತ್ನಿ ನೇಣು ಬಿಗಿದುಕೊಳ್ಳುವಾಗ ಪತಿ ಕಾಪಾಡದೇ ತನ್ನ ಮೊಬೈಲ್‍ನಲ್ಲಿ ವೀಡಿಯೋ ಸೆರೆಹಿಡಿದಿದ್ದಾನೆ. ಕೌಟುಂಬಿಕ ಕಲಹದಿಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಪತಿ ಶ್ರೀರಾಮ್ ಶ್ರೀನಿವಾಸ್ ತಡೆಯಲು ಪ್ರಯತ್ನಿಸುವ ಬದಲು, ಘಟನೆಯ ವೀಡಿಯೋವನ್ನು ರೆಕಾರ್ಡ್ ಮಾಡಿ, ನೀನು ಹಾಗೆ ಕುಣಿಕೆ ಕಟ್ಟಬಾರದು. ಅದನ್ನು ಹೀಗೆ ಮಾಡಬೇಕು ಎಂದು ಅವಳಿಗೆ ಸೂಚನೆ ನೀಡಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ – ಮಲತಂದೆ ಸೇರಿ ಮೂವರು ಅರೆಸ್ಟ್
ಆರಂಭದಲ್ಲಿ ತಮಾಷೆ ಮಾಡುತ್ತಿದ್ದಾಳೆ ಎಂದು ಗ್ರಹಿಸಿದ್ದರಿಂದ ಶ್ರೀನಿವಾಸ್ ತನ್ನ ಹೆಂಡತಿಯ ಪ್ರಾಣ ಉಳಿಸಲು ವಿಫಲನಾಗಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಪತ್ನಿ ಕೃಷ್ಣವೇಣಿ ಮೃತಪಟ್ಟಿದ್ದು, ಪತಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿ ಲೋಕೋ ಪೈಲಟ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಎನ್.ಆರ್‌ಪುರ | ಮಗನ ಎದುರೇ ತಂದೆ, ತಾಯಿಯನ್ನು ಕೊಚ್ಚಿ ಕೊಲೆಗೈದವನಿಗೆ ಗಲ್ಲು ಶಿಕ್ಷೆ

