ಮಂಗಳೂರು: ಶಿರಾಡಿ ಘಾಟ್‌ನಲ್ಲಿ (Shiradi Ghat) ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಗುಂಡ್ಯ ಸಮೀಪ ದುರ್ಘಟನೆ ನಡೆದಿದೆ. ಕೆಎಸ್ಆರ್‌ಟಿಸಿ ರಾಜಹಂಸ ಬಸ್-ಕಾರಿನ ನಡುವೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ, ಉಜಿರೆ ನಿವಾಸಿಗಳಾದ ಶ್ರೀಧರ್ ಮರಕಡ, ಜನಾರ್ದನ ಕೆರಿಮಾರ್ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಜಗಳವಾಡಿ ನೇಣಿಗೆ ಶರಣಾದ ಮಹಿಳೆ – ತಮಾಷೆ ಮಾಡ್ತಿದ್ದಾಳೆ ಅಂತ ವೀಡಿಯೋ ಮಾಡಿದ ಪತಿ!
ಸುರೇಶ್‌ಗೆ ಗಂಭೀರ ಗಾಯಗಳಾಗಿದ್ದಾರೆ. ಕಾರಿನಲ್ಲಿದ್ದವರು ಸಕಲೇಶಪುರಕ್ಕೆ ಮದುವೆಗೆ ಹೋಗಿ ವಾಪಸ್ ಬರುತ್ತಿದ್ದರು. ಮಂಗಳೂರಿನಿಂದ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದುರಂತ ನಡೆದಿದೆ.

