ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ (Donald Trump) ಟ್ರಂಪ್ ಅವರ ಸಂಪುಟದಲ್ಲಿ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿದ್ದ ತುಳಸಿ ಗಬ್ಬಾರ್ಡ್ (Tulasi Gabbard) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಶುಕ್ರವಾರ (ಮೇ 22) ಟ್ರಂಪ್ ಭೇಟಿಯಾದ ಗಬ್ಬಾರ್ಡ್ ರಾಜೀನಾಮೆ ಬಗ್ಗೆ ತಿಳಿಸಿದ್ದು, ತಮ್ಮ ಪತಿ ಅಬ್ರಹಾಂಗೆ ಅಪರೂಪದ ಮೂಳೆ ಕ್ಯಾನ್ಸರ್ (Bone Cancer) ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆ ಇಂತಹ ಕಠಿಣ ಸಂದರ್ಭದಲ್ಲಿ ಅವರೊಂದಿಗಿರಬೇಕು. ಹೀಗಾಗಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಇನ್ನೂ ಜೂ.30 ತುಳಸಿ ಗಬ್ಬಾರ್ಡ್ ಅವರ ಅಧಿಕಾರವಧಿಯ ಕೊನೆಯ ದಿನವಾಗಲಿದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಅಮೆರಿಕದ ಗುಪ್ತಚರ ವಿಭಾಗಕ್ಕೆ ತುಳಸಿ ಬಾಸ್- ಭಾರತ ಸಂಬಂಧ ಇಲ್ಲದೇ ಇದ್ದರೂ ಹಿಂದೂ ಹೆಸರು ಬಂದಿದ್ದು ಹೇಗೆ?
ರಾಜೀನಾಮೆ ಪತ್ರದಲ್ಲಿ ಏನಿದೆ?
ನನ್ನ ಪತಿ ಅಬ್ರಹಾಂ ಅವರಿಗೆ ಇತ್ತೀಚೆಗೆ ಅಪರೂಪದ ಮೂಳೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಈ ಕಠಿಣ ಸಮಯದಲ್ಲಿ ನಾನು ಅವರೊಂದಿಗಿರಬೇಕು. ಹೀಗಾಗಿ ನಾನು ಈ ಹುದ್ದೆಯಿಂದ ಮುಕ್ತಿ ಪಡೆಯುವುದು ಅನಿವಾರ್ಯವಾಗಿದೆ ಎಂದಿದ್ದಾರೆ.
ನನ್ನ 11 ವರ್ಷಗಳ ದಾಂಪತ್ಯ ಜೀವನದಲ್ಲಿ ಪತಿಯೇ ನನಗೆ ದೊಡ್ಡ ಶಕ್ತಿಯಾಗಿದ್ದರು. ಹೀಗಾಗಿ ಇಂತಹ ಗಂಭೀರ ಪರಿಸ್ಥಿತಿಯಲ್ಲಿ ನಾನು ಅವರನ್ನು ಏಕಾಂಗಿಯಾಗಿ ಬಿಟ್ಟು ಜವಾಬ್ದಾರಿಯುತ ಹುದ್ದೆಯಲ್ಲಿ ಮುಂದುವರಿಯಲು ನನ್ನ ಮನಸ್ಸು ಒಪ್ಪುತ್ತಿಲ್ಲ. ಇಲ್ಲಿಯವರೆಗೆ ನನಗೆ ಈ ಮಹತ್ತರ ಜವಾಬ್ದಾರಿ ನೀಡಿದ್ದಕ್ಕಾಗಿ ಅಧ್ಯಕ್ಷ ಟ್ರಂಪ್ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಜೂನ್ ಅಂತ್ಯದೊಳಗೆ ಸುಗಮವಾಗಿ ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ.ಇದನ್ನೂ ಓದಿ: ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್
ಇನ್ನೂ ಪತಿಯ ಅನಾರೋಗ್ಯದ ಕಾರಣ ನೀಡಿ ಗಬ್ಬಾರ್ಡ್ ರಾಜೀನಾಮೆ ನೀಡಿದ್ದಾರೆ. ಆದರೆ ಶ್ವೇತಭವನವೇ ಅವರ ಮೇಲೆ ಒತ್ತಡ ಹೇರಿ ರಾಜೀನಾಮೆ ಕೊಡಿಸಿದೆ ಎಂದು ಮೂಲಗಳು ತಿಳಿಸಿವೆ.
ಯಾರು ತುಳಸಿ ಗಬ್ಬಾರ್ಡ್?
ಸುಮಾರು 20 ವರ್ಷದಗಳ ಸೈನ್ಯದ ಶಾಖೆಯಾದ ನ್ಯಾಷನಲ್ ಗಾರ್ಡ್ನಲ್ಲಿ ಸೇವೆ ಸಲ್ಲಿಸಿರುವ ಇವರಿಗೆ ಭಾರತದ ಜೊತೆ ನೇರವಾದ ಸಂಬಂಧ ಇಲ್ಲ. ಆದರೆ ಇವರ ತಾಯಿ ಹಿಂದೂ (ಊiಟಿಜu) ಧರ್ಮವನ್ನು ಪಾಲಿಸುತ್ತಿದ್ದ ಹಿನ್ನೆಲೆಯಲ್ಲಿ ಪುತ್ರಿಗೆ ತುಳಸಿ ಎಂದು ಹೆಸರನ್ನು ಇರಿಸಿದ್ದರು. ಬಾಲ್ಯದಲ್ಲಿ ಯೋಗ ಅಭ್ಯಾಸ ಮಾಡುತ್ತಿದ್ದ ಇವರು ಭಗವದ್ಗೀತೆಯಿಂದ ಆಧ್ಯಾತ್ಮಿಕ ವಿಷಯಗಳನ್ನು ಕಲಿತ್ತಿದ್ದಾರೆ. ವೈಷ್ಣವ ಹಿಂದೂ ಸಂಘಟನೆಯಾದ ಸೈನ್ಸ್ ಆಫ್ ಐಡೆಂಟಿಟಿ ಫೌಂಡೇಶನ್ ಮತ್ತು ಇಸ್ಕಾನ್ ಸಂಸ್ಥೆಯ ಪ್ರಭಾವದಿಂದಾಗಿ ತುಳಸಿ ಅವರು ಹಿಂದೂ ಜೀವನ ಪದ್ದತಿಯಂತೆ ಜೀವಿಸುತ್ತಿದ್ದಾರೆ.
2015ರಲ್ಲಿ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಿರುವ ಅಬ್ರಹಾಂ ವಿಲಿಯಮ್ಸ್ ಅವರನ್ನು ಹಿಂದೂ ಸಂಪ್ರದಾಯದಂತೆ ವಿವಾಹವಾದರು. ಪತಿಯೂ ಹಿಂದೂ ಧರ್ಮವನ್ನು ಪಾಲಿಸುತ್ತಿದ್ದಾರೆ. ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಭಗವತ್ ಗೀತೆಯ ಮೇಲೆ ಕೈಯಿಟ್ಟು ತುಳಸಿ ಪ್ರಮಾಣ ವಚನ ಸ್ವೀಕರಿಸಿದ್ದರು.
2014ರ ಅಮೆರಿಕ ಪ್ರವಾಸದ ಸಂದರ್ಭದಲ್ಲಿ ತುಳಸಿ ಗಬ್ಬಾರ್ಡ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಭಗವದ್ಗೀತೆ ಪುಸ್ತಕವನ್ನು ಉಡುಗೊರೆಯಾಗಿ ನೀಡಿದ್ದರು. ಅಷ್ಟೇ ಅಲ್ಲದೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಧಾನಿಯವರ ಪ್ರಸ್ತಾವನೆಗೆ ಅವರು ಬೆಂಬಲ ವ್ಯಕ್ತಪಡಿಸಿದ್ದರು.ಇದನ್ನೂ ಓದಿ: ಇಸ್ಲಾಮಿಸ್ಟ್‌ಗಳು, ಇಸ್ಲಾಮಿಸಂ ಇಡೀ ವಿಶ್ವದ ಭದ್ರತೆಗೇ ಅಪಾಯ – ತುಳಸಿ ಗಬ್ಬಾರ್ಡ್ ಕಳವಳ

