ಮೈಸೂರು: ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿನಿಧಿಸುವ ವರುಣ ಕ್ಷೇತ್ರ ವರಕೊಡುನಲ್ಲಿ ಜಾತ್ರೆ (Varakodu Jatre) ಹಿನ್ನೆಲೆ ಸಿಎಂ ತಮ್ಮ ಪ್ರಭಾವ ಬಳಸಿ ಒಂದು ಲೋಡ್ ಸಿಲಿಂಡರ್ (Gas Cylinder) ಕೊಡಿಸಿದ್ದಾರೆ.
ಶುಕ್ರವಾರ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದ ವರಕೊಡುನಲ್ಲಿ ದೊಡ್ಡ ಜಾತ್ರೆ ನಡೆಯಿತು. ಜಾತ್ರೆಗೆ ಬಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಇತ್ತು. ಪ್ರಸಾದ ತಯಾರಿಕೆಗೆ ಸಿಎಂ ಸಿದ್ದರಾಮಯ್ಯ ಅವರೇ ತಮ್ಮ ಪ್ರಭಾವ ಬಳಸಿ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ದಾರೆ. ಸುಮಾರು 200-250 ಸಿಲಿಂಡರ್ ಅನ್ನು ಸಿಎಂ ಸಿದ್ದರಾಮಯ್ಯ ತಮ್ಮ ಕ್ಷೇತ್ರದ ಜಾತ್ರೆಗೆ ಕೊಡಿಸಿದ್ದಾರೆ. ಇದನ್ನೂ ಓದಿ: ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ – ಸಂದರ್ಶನದ ದಿನಾಂಕ ಮುಂದೂಡಿದ KPSC

ಮೈಸೂರು ಹೋಟೆಲ್ ಸಂಘದ ಅಧ್ಯಕ್ಷ ನಾರಾಯಣಗೌಡ ಈ ವಿಚಾರ ಬಹಿರಂಗ ಪಡಿಸಿದ್ದಾರೆ. ಸಿಎಂ ಮನಸ್ಸು ಮಾಡಿದರೆ ಏನೂ ಬೇಕಾದರು ಆಗುತ್ತದೆ. ಜಾತ್ರೆಗೂ ಎರಡು ದಿನ ಮೊದಲೇ ಡಿಸಿ ಜೊತೆ ಮಾತನಾಡಿ ಸಿಲಿಂಡರ್ ಕೊಡಿಸಿದ್ದಾರೆ. ಹೀಗಾಗಿ ಹೋಟೆಲ್‌ಗಳಿಗೂ ಕೂಡ ದಿನಕ್ಕೆ ಒಂದೋ ಎರಡೋ ಸಿಲಿಂಡರ್ ಕೊಡಿಸಲು ಸಿಎಂ ಪ್ರಭಾವ ಬೀರಬೇಕು. ಮೈಸೂರಿನಲ್ಲಿ ಸುಮಾರು ಪ್ರತಿನಿತ್ಯ 4,000 ಸಿಲಿಂಡರ್ ಬಳಸಲಾಗುತ್ತದೆ. ಅಷ್ಟು ಸಾಧ್ಯವಿಲ್ಲವೆಂದರೂ ಕನಿಷ್ಠ 700-800 ಸಿಲಿಂಡರ್ ಲಭ್ಯವಾಗುವಂತೆ ಸಿಎಂ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

