ನವದೆಹಲಿ: ಸಾಮಾಜಿಕ ಕಾರ್ಯಕರ್ತ (Social Worker) ಸೋನಮ್ ವಾಂಗ್ಚುಕ್ (Sonam Wangchuk) ಅವರ ಬಂಧನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ್ದು, ತಕ್ಷಣವೇ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.
ಕಳೆದ ಸೆಪ್ಟೆಂಬರ್ನಲ್ಲಿ ಲೇಹ್ನಲ್ಲಿ ನಡೆದ ಹಿಂಸಾಚಾರಕ್ಕೆ (Leh Violence) ಸಂಬಂಧಿಸಿದಂತೆ ಸೋನಮ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಬಂಧಿಸಿ ರಾಜಸ್ಥಾನದ ಜೋಧ್ಪುರ ಜೈಲಿಗೆ ಕಳುಹಿಸಲಾಗಿತ್ತು. ಇದನ್ನೂ ಓದಿ: ಇರಾನ್ ನಾವಿಕರ ಶವವನ್ನು ಹೊತ್ತುಕೊಂಡು ಕೊಚ್ಚಿಯಿಂದ ಅರ್ಮೇನಿಯಾಗೆ ವಿಮಾನ ಟೇಕಾಫ್
ಲೇಹ್ನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳ ನಂತರ ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ವಾಂಗ್ಚುಕ್ ಅವರನ್ನು ಬಂಧಿಸಲಾಗಿದೆ ಎಂದು ಸರ್ಕಾರ ಹೇಳಿತ್ತು. ಲಡಾಖ್ನಲ್ಲಿ ಶಾಂತಿ, ಸ್ಥಿರತೆ ಮತ್ತು ಪರಸ್ಪರ ನಂಬಿಕೆಯ ವಾತಾವರಣವನ್ನು ಬೆಳೆಸಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶವನ್ನು ಮುಂದುವರಿಸಲು ಮತ್ತು ಸೂಕ್ತ ಪರಿಗಣನೆಯ ನಂತರ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ನು ಚಲಾಯಿಸುವ ಮೂಲಕ ತಕ್ಷಣದಿಂದ ಜಾರಿಗೆ ಬರುವಂತೆ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವಾಲಯ ಹೇಳಿದೆ. ಇದನ್ನೂ ಓದಿ: ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಒಂದು ಲೋಡ್ ಸಿಲಿಂಡರ್ ಕೊಡಿಸಿದ ಸಿಎಂ
ನೇಪಾಳ ಮತ್ತು ಬಾಂಗ್ಲಾದೇಶದಂತೆಯೇ ಪ್ರತಿಭಟನೆಗಳಿಗೆ ಜೆನ್-ಝಡ್ ಅನ್ನು ಪ್ರಚೋದಿಸಲು ವಾಂಗ್ಚುಕ್ ಪ್ರಯತ್ನಿಸಿದ್ದಾರೆ ಎಂದು ಕೇಂದ್ರವು ಈ ಹಿಂದೆ ಹೇಳಿತ್ತು. ವಾಂಗ್ಚುಕ್ ಅವರ ಬಂಧನವು ಕಾನೂನುಬಾಹಿರ ಮತ್ತು ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಅನಿಯಂತ್ರಿತ ಕ್ರಮ ಎಂದು ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ – ಸಂದರ್ಶನದ ದಿನಾಂಕ ಮುಂದೂಡಿದ KPSC
ಲಡಾಖ್ಗೆ ರಾಜ್ಯ ಸ್ಥಾನಮಾನ ಮತ್ತು ಆರನೇ ವೇಳಾಪಟ್ಟಿ ಸ್ಥಾನಮಾನವನ್ನು ಕೋರುವ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿತ್ತು. ಘಟನೆಯಲ್ಲಿ ನಾಲ್ಕು ಜನರು ಸಾವನ್ನಪ್ಪಿದರು, 90 ಜನರು ಗಾಯಗೊಂಡ ಎರಡು ದಿನಗಳ ಬಳಿಕ ವಾಂಗ್ಚುಕ್ ಬಂಧನವಾಗಿತ್ತು. ಇದನ್ನೂ ಓದಿ: ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

