ಲೇಹ್: ಲಡಾಖ್‌ನ (Ladakh) ಲೇಹ್ ಬಳಿಯ ಟ್ಯಾಂಗ್ಸ್ಟೆ ಪರ್ವತ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ (Army Helicopter) ಪತನವಾಗಿದೆ. ಅದೃಷ್ಟವಶಾತ್ ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೇ 20ರಂದು ನಡೆದ ಈ ಅಪಘಾತದಲ್ಲಿ 3ನೇ ಪದಾತಿ ದಳದ ಜನರಲ್ ಆಫೀಸರ್ ಕಮಾಂಡಿಂಗ್ ಮೇಜರ್ ಜನರಲ್ ಸಚಿನ್ ಮೆಹ್ತಾ ಅವರು ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್‌ನ್ನು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬ ಮೇಜರ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತದ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ, ಮೂವರನ್ನೂ ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಇದನ್ನೂ ಓದಿ: ಮಾಸ್ಕೋ ಮೇಲೆ ಉಕ್ರೇನ್ ಡ್ರೋನ್ ದಾಳಿ – ಓರ್ವ ಭಾರತೀಯ ಸಾವು, ಮೂವರಿಗೆ ಗಂಭೀರ ಗಾಯ
ಅಪಘಾತದ ನಂತರ ಮೇಜರ್ ಜನರಲ್ ಸಚಿನ್ ಮೆಹ್ತಾ ಅವರು ಅಪಘಾತ ಸ್ಥಳದಲ್ಲೇ ಸೆಲ್ಫಿ ತೆಗೆದುಕೊಂಡಿದ್ದು, ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಸೈನಿಕರ ಧೈರ್ಯ ಮತ್ತು ಮನೋಸ್ಥೈರ್ಯಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ನೆಟ್ಟಿಗರು ಪ್ರಶಂಸಿದ್ದಾರೆ.
ಹೆಲಿಕಾಪ್ಟರ್ ಪತನಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ತಾಂತ್ರಿಕ ದೋಷ ಅಥವಾ ಹವಾಮಾನ ಸಂಬಂಧಿ ಕಾರಣಗಳ ಬಗ್ಗೆ ಸೇನೆಯು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಇದನ್ನೂ ಓದಿ: US ನ ಎರಡು F-18 ಯುದ್ಧ ವಿಮಾನಗಳು ಡಿಕ್ಕಿ – ಆಗಸದಲ್ಲಿ ಉರಿದ ಜೆಟ್, ಚಿಮ್ಮಿದ ಬೆಂಕಿ ಉಂಡೆಗಳು
