ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು (Bowring Hospital Compound Collapse) 7 ಜನರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಕಂಪನಿ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ (Commercial Street Police) ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ.
ಆರೋಗ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿದೆ. ಚೆನ್ನೈ ಮೂಲದ ಎಎಸ್‌ಆರ್ ಟ್ರೇಡರ್ಸ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆಗೆ ತಾಂತ್ರಿಕ ಸಮಿತಿ ರಚನೆ ಮಾಡಲಾಗಿತ್ತು. ಬೌರಿಂಗ್ ಆಸ್ಪತ್ರೆ ನೂತನ ಕಟ್ಟಡ ನಿರ್ಮಾಣಕ್ಕಾಗಿ ಹಳೆ ಕಟ್ಟಡ ತೆರವುಗೊಳಿಸಲು ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ವಹಿಸಲಾದ ಎಎಸ್‌ಆರ್ ಟ್ರೇಡರ್ಸ್ ಕಂಪನಿ ನಿರ್ಲಕ್ಷ್ಯ ವಹಿಸಿದ್ದು, ಕಟ್ಟಡ ನೆಲಸಮ ಮಾಡಿದ ತ್ಯಾಜ್ಯ ವಿಲೇವರಿ ಮಾಡದೆ ಅಲ್ಲಿ ಬಿಟ್ಟು ಹೋಗಿದ್ದು ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಇದನ್ನೂ ಓದಿ: ಧಾರವಾಡದಲ್ಲಿ ಬೆಚ್ಚಿಬೀಳಿಸುವ ಘಟನೆ; ಬಾಲಕಿ ಮೇಲೆ ಅತ್ಯಾಚಾರ – ಖಾಜಾಸಾಬ್ ವಿರುದ್ಧ ಕೇಸ್
ನೋಟಿಸ್‌ಗೆ ಪ್ರತಿಕ್ರಿಯಿಸದ ಗುತ್ತಿಗೆದಾರ ಕಂಪನಿ:
ಇನ್ನು ತ್ಯಾಜ್ಯ ತೆರವುಗೊಳಿಸದ ಹಾಗೂ ನಿಯಮ ಉಲ್ಲಂಘಿಸಿದ ಕುರಿತು ಸ್ಪಷ್ಟೀಕರಣ ನೀಡುವಂತೆ ಸರ್ಕಾರದ ವತಿಯಿಂದ ಎಎಸ್‌ಆರ್ ಟ್ರೇಡರ್ಸ್ ಕಂಪನಿಯ ಇಮೇಲ್ ಐಡಿಗೆ ನೋಟಿಸ್ ಕಳುಹಿಸಲಾಗಿತ್ತು. ಮೇ 18ರ ಒಳಗಾಗಿ ಲಿಖಿತ ಸ್ಪಷ್ಟೀಕರಣ ನೀಡಬೇಕೆಂದು ಎಕ್ಸಿಕ್ಯೂಟಿವ್ ಇಂಜಿನಿಯರ್ ಚಂದ್ರು ಗಡುವು ನೀಡಿದ್ದರೂ ಗುತ್ತಿಗೆದಾರ ಕಂಪನಿ ಇಮೇಲ್‌ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಭಟ್ಕಳ ನದಿ ದುರಂತ – ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ನಿರ್ದೇಶನ ಮೇರೆಗೆ ದೂರು ದಾಖಲಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಕಂಪನಿಗೆ ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: 114 ರಫೇಲ್ ಜೆಟ್ ಖರೀದಿಗೆ ವಿನಂತಿ ಪತ್ರ ಅಂತಿಮಗೊಳಿಸಿದ ಭಾರತ – ಶೀಘ್ರದಲ್ಲೇ ಫ್ರಾನ್ಸ್‌ಗೆ ಕಳುಹಿಸಲು ನಿರ್ಧಾರ
