ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಪ್ರತ್ಯೇಕತಾವಾದವನ್ನು ಉತ್ತೇಜಿಸಲು ನಿಷೇಧಿತ `ಜಮಾತ್-ಎ-ಇಸ್ಲಾಮಿ’ (Jamaat-e-Islami) ಸಂಘಟನೆಯ ಪುನಶ್ಚೇತನಕ್ಕೆ ಯತ್ನಿಸುತ್ತಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ (NIA) ಮಧ್ಯ ಮತ್ತು ದಕ್ಷಿಣ ಕಾಶ್ಮೀರದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದೆ.
ಮೂಲಗಳ ಪ್ರಕಾರ, ಶ್ರೀನಗರದ (Srinagar) ಲಾಲ್ ಬಜಾರ್ ಹಾಗೂ ದಕ್ಷಿಣ ಕಾಶ್ಮೀರದ ಶೋಪಿಯಾನ್ ಸೇರಿದಂತೆ ಹಲವೆಡೆ ಎನ್‌ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: 700 ಅಡಿ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – ಮಹಾಬಲೇಶ್ವರಕ್ಕೆ ತೆರಳಿದ್ದ 8 ಮಂದಿ ದುರ್ಮರಣ
1941ರಲ್ಲಿ ಸ್ಥಾಪನೆಯಾದ ಜಮಾತ್-ಎ-ಇಸ್ಲಾಮಿ ಸಂಘಟನೆಯು, ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಪ್ರಚೋದಿಸಲು, ಭಾರತ ವಿರೋಧಿ ಪ್ರಚಾರ ಮತ್ತು ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ ಗಂಭೀರ ಆರೋಪಗಳನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು (Central Govt) 2024ರ ಫೆಬ್ರವರಿಯಲ್ಲಿ `ಜಮಾತ್-ಎ-ಇಸ್ಲಾಮಿ ಜಮ್ಮು ಕಾಶ್ಮೀರ’ ಸಂಘಟನೆಯನ್ನು 1967ರ ಸೆಕ್ಷನ್ 3(1)ರ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಇನ್ನೂ ಐದು ವರ್ಷಗಳ ಅವಧಿಗೆ `ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಿ, ನಿಷೇಧವನ್ನು ವಿಸ್ತರಿಸಿತ್ತು.
ಇದಕ್ಕೂ ಮುನ್ನ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸುವ ಕೆಲವು ತಿಂಗಳುಗಳ ಮುಂಚೆ, ಅಂದರೆ 2019ರ ಫೆಬ್ರವರಿಯಲ್ಲಿ `ಜಮಾತ್-ಎ-ಇಸ್ಲಾಮಿ ಜಮ್ಮು ಕಾಶ್ಮೀರ’ ಸಂಘಟನೆಯನ್ನು ಮೊದಲ ಬಾರಿಗೆ ನಿಷೇಧಿಸಲಾಗಿತ್ತು. ಇದನ್ನೂ ಓದಿ: 114 ರಫೇಲ್ ಜೆಟ್ ಖರೀದಿಗೆ ವಿನಂತಿ ಪತ್ರ ಅಂತಿಮಗೊಳಿಸಿದ ಭಾರತ – ಶೀಘ್ರದಲ್ಲೇ ಫ್ರಾನ್ಸ್‌ಗೆ ಕಳುಹಿಸಲು ನಿರ್ಧಾರ
