ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ ಭಟ್ಕಳದ (Bhatkal) ಶಾರದಾಹೊಳೆಯಲ್ಲಿ ಇಂದು ನೆರವೇರಿದೆ.
ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಪ್ರದೇಶವೇ ಶೋಕ ಸಾಗರದಲ್ಲಿ ಮುಳುಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ (Mankala Vaidya) ಮೃತರ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಭಟ್ಕಳದ ಇತಿಹಾಸದಲ್ಲಿ ಇಂತಹ ದುರಂತ ನಡೆದಿರಲಿಲ್ಲ. ಏಪ್ರಿಲ್-ಮೇ ತಿಂಗಳಲ್ಲಿ ಕಪ್ಪೆ ಚಿಪ್ಪು ತೆಗೆಯುವುದು ಸಾಮಾನ್ಯ. ಆದರೆ ಈ ದುರ್ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕಾರಣ ಪತ್ತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಭಟ್ಕಳ ನದಿ ದುರಂತ – ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಮೃತರ ಕುಟುಂಬಗಳಿಗೆ ಸರ್ಕಾರದ ನೆರವು ಸದಾ ಇರಲಿದ್ದು, ಚಿಕಿತ್ಸೆ ಪಡೆಯುತ್ತಿರುವವರ ವೈದ್ಯಕೀಯ ವೆಚ್ಚವನ್ನು ನಾನೇ ಭರಿಸುತ್ತೇನೆ. ಜೊತೆಗೆ ಮೃತರ ಮಕ್ಕಳ ಶಿಕ್ಷಣಕ್ಕೆ ಅಗತ್ಯ ನೆರವು ನೀಡಲು ಸಿದ್ಧನಿದ್ದೇನೆ ಎಂದು ಭರವಸೆಯ ಮಾತುಗಳನ್ನು ಹೇಳಿದ್ದಾರೆ.
