ರಾಯಚೂರು: ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ (KKRTC) ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichur) ಸಿಂಧನೂರು (Sindhanur) ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ನಡೆದಿದೆ.
ಕೊಪ್ಪಳದ ಬೆವಿನಹಾಳ ಗ್ರಾಮದ ದೊಡ್ಡ ಈರಮ್ಮ (38) ಮೃತ ದುರ್ದೈವಿ. ಬಸ್ ಚಾಲಕನ ಅಜಾಗರೂಕತೆಯಿಂದ ಮಹಿಳೆ ಸಾವನ್ನಪ್ಪಿದ್ದು, ಅಪಘಾತದ ದೃಶ್ಯ ಪ್ರಯಾಣಿಕರನ್ನ ಬೆಚ್ಚಿಬೀಳಿಸಿದೆ. ಇದನ್ನೂ ಓದಿ: ಅಫ್ಘಾನ್ ಇತಿಹಾಸದಲ್ಲೇ ಅತ್ಯಂತ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ದಾಳಿ – 400 ಜನರು ಸಾವು
ಸಿಂಧನೂರು ಬಸ್ ನಿಲ್ದಾಣದಲ್ಲಿ ಸೋಮವಾರ ಅಪಘಾತ ನಡೆದಿದೆ. ಘಟನೆ ಸಂಬಂಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 18ನೇ ದಿನಕ್ಕೆ ಕಾಲಿಟ್ಟ ಯುದ್ಧ – ಇರಾನ್‌ನ 200ಕ್ಕೂ ಹೆಚ್ಚು ಸೇನಾ ನೆಲೆಗಳು ಉಡೀಸ್

