ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಗಳಿಗೆ (Irrigation Project) ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ. ಆದ ಕಾರಣ ನಾನು, ಹೆಚ್.ಕೆ ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.
ದೆಹಲಿಗೆ ತೆರಳುವ ಮುನ್ನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಬಿಸಿಲನಾಡು ರಾಯಚೂರಿನಲ್ಲಿ ಆಲಿಕಲ್ಲು ಮಳೆ
ಚರ್ಚೆಯ ವಿಚಾರಗಳನ್ನು ಬಂದ ನಂತರ ತಿಳಿಸುತ್ತೇವೆ. ಎಲ್ಲರು ಒಟ್ಟಾಗಿ ನೀರಾವರಿ ವಿಚಾರಗಳ ಬಗ್ಗೆ ತೀರ್ಮಾನ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಸದನದಲ್ಲಿ ಶಾಸಕರ ಪ್ರಶ್ನೆಗೆ ಉತ್ತರ ನೀಡದ 8 ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

