ದಾವಣಗೆರೆ: ಜಗಳೂರಲ್ಲಿ (Jagalur) ಗೃಹ ಬಳಕೆ ಸಿಲಿಂಡರ್ (LPG Cylinders) ಬಳಸಿ ಅಡುಗೆ ತಯಾರಿಸುತ್ತಿದ್ದ ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ್ದಾರೆ. ಈ ವೇಳೆ 20 ಗೃಹ ಬಳಕೆ ಸಿಲಿಂಡರ್ ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ.
ನಗರದ ಹಲವು ಹೋಟೆಲ್ ಹಾಗೂ ಟೀ ಅಂಗಡಿಗಳಲ್ಲಿ ಗೃಹ ಬಳಕೆ ಸಿಲಿಂಡರ್ ಬಳಕೆ ಮಾಡಲಾಗುತ್ತಿತ್ತು. ಈ ಮಾಹಿತಿ ಮೇರೆಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿಯವರು ದಾಳಿ ನಡೆಸುವಂತೆ ತಹಶೀಲ್ದಾರ್ ಕಲೀಂ ಉಲ್ಲಾ ಅವರಿಗೆ ಸೂಚಿಸಿದ್ದರು. ಡಿಸಿ ಸೂಚನೆ ಮೇರೆಗೆ ದಾಳಿ ನಡೆಸಿದಾಗ ಗೃಹ ಬಳಕೆಯ ಸಿಲಿಂಡರ್‌ಗಳು ಪತ್ತೆಯಾಗಿವೆ. ಇದನ್ನೂ ಓದಿ: ಭಾರತಕ್ಕೆ 46,000 ಟನ್ ಎಲ್‌ಪಿಜಿ ಹೊತ್ತು ತಂದ ನಂದಾದೇವಿ ಹಡಗು
ಗೃಹ ಬಳಕೆ ಸಿಲಿಂಡರ್‌ಗಳನ್ನು ಹೋಟೆಲ್‍ಗಳಲ್ಲಿ ಬಳಕೆ ಮಾಡುವಂತಿಲ್ಲ. ಆದರೆ ಕಮರ್ಷಿಯಲ್ ಸಿಲಿಂಡರ್ ಅಭಾವದ ಹಿನ್ನಲೆ ಗೃಹ ಬಳಕೆ ಸಿಲಿಂಡರ್‌ಗಳನ್ನು ಹೋಟೆಲ್ ಮಾಲೀಕರು ಬಳಕೆ ಮಾಡುತ್ತಿದ್ದಾರೆ. ಇದನ್ನೂ ಓದಿ: ನಾವು ಪ್ರತಿಯೊಂದು ಹಡಗಿನ ಜೊತೆ ಸಂಪರ್ಕದಲ್ಲಿದ್ದೇವೆ, ನಾಳೆ ಬರುತ್ತೆ 81 ಸಾವಿರ ಟನ್ ಕಚ್ಚಾ ತೈಲ: ಕೇಂದ್ರ

