ದಾವಣಗೆರೆ: ಇಲ್ಲಿನ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ (Davanagere South Byelection) ದಿನಾಂಕ ನಿಗದಿಯಾಗಿದ್ದು, ಕಾಂಗ್ರೆಸ್ (Congress) ಪಕ್ಷದಲ್ಲಿ ಟಿಕೆಟ್‌ಗಾಗಿ ಫೈಟ್ ಶುರುವಾಗಿದೆ. ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಆಯೋಜಿಸಿದ್ದ ಸಭೆಯಲ್ಲಿ ಗದ್ದಲ ಉಂಟಾಗಿದೆ.
ಉಸ್ತುವಾರಿ ಸಮಿತಿ ಸದಸ್ಯರು ಪಕ್ಷದ ಮುಖಂಡರ ಅಭಿಪ್ರಾಯ ಸಂಗ್ರಹಣೆಗೆ ಆಗಮಿಸಿದ್ದರು. ಅಭಿಪ್ರಾಯ ಸಂಗ್ರಹದ ಸಂದರ್ಭದಲ್ಲಿ ಕಚೇರಿಯ ಮುಂಭಾಗ ಹೈಡ್ರಾಮವೇ ನಡೆದಿದೆ. ಒಂದು ಕಡೆ ಮುಸ್ಲಿಂ ಮುಖಂಡರು ಹಾಗೂ ಯುವಕರು ಅಹಿಂದಗೆ ಟಿಕೆಟ್ ನೀಡುವಂತೆ ಒತ್ತಾಯ ಮಾಡಿದರು. ಮತ್ತೊಂದಡೆ ಎಸ್.ಎಸ್ ಮಲ್ಲಿಕಾರ್ಜುನ್ ಬೆಂಬಲಿಗರು ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಘೋಷಣೆ ಕೂಗಿದರು. ಇದನ್ನೂ ಓದಿ: ದಾವಣಗೆರೆ ದಕ್ಷಿಣ ಉಪಚುನಾವಣೆ – ಕ್ಷೇತ್ರದಲ್ಲಿ 2,31,683 ಮತದಾರರಿದ್ದಾರೆ: ಡಿಸಿ ಮಾಹಿತಿ
ಇದರಿಂದ ಕೋಪಗೊಂಡ ಉಸ್ತುವಾರಿ ಸಮಿತಿಯ ಸದಸ್ಯರಾದ ಮಂಜುನಾಥ್ ಬಂಡಾರಿ, ಮಾಜಿ ಸಚಿವ ಹೆಚ್.ಆಂಜನೇಯ, ಹೆಚ್.ಎಂ ರೇವಣ್ಣ ಬೇಸರಗೊಂಡು ಹೊರ ನಡೆದರು. ಅಭಿಪ್ರಾಯ ಸಂಗ್ರಹ ಮಾಡದೇ ಕೇವಲ ಅಭ್ಯರ್ಥಿಗಳ ಪಟ್ಟಿ ಹಿಡಿದು ತೆರಳಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ವಾಗ್ವಾದಕ್ಕೆ ಇಳಿದಿದ್ದು ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆಯನ್ನ ತಿಳಿಗೊಳಿಸಿದರು.
ಈ ಬಾರಿ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದಿದ್ದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಷ್ಟ ಅನುಭವಿಸುತ್ತದೆ. ಅಲ್ಪಸಂಖ್ಯಾತರನ್ನು ಕೇವಲ ಮತ ಹಾಕಲು ಮಾತ್ರ ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಮುಸ್ಲಿಂ ಮುಖಂಡರು ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ

