ನೆಲಮಂಗಲ: ತಾಲೂಕಿನ (Nelamangala) ಚಂದನ ಹೊಸಹಳ್ಳಿ ಗ್ರಾಮದ ಮನೆಯೊಂದರಲ್ಲಿ ನಿಗೂಢ ಸ್ಫೋಟ (Explosion) ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮೂವರು ಗಂಭೀರ ಗಾಯಗೊಂಡಿದ್ದಾರೆ.
ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಚಂದನ ಹೊಸಹಳ್ಳಿ ಗ್ರಾಮದ ಬಳಿ ಇರುವ ಬಿಲ್ಡಿಂಗ್‌ನ ನಾಲ್ಕನೇ ಮಹಡಿಯಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಅಭಿನಂದನ್ ಶರ್ಮಾ, ಅಭಿಷೇಕ್ ಶರ್ಮಾ ಹಾಗೂ ರಾಮ್ ಭಚನ್ ಶರ್ಮಾ ಎಂದು ಗುರುತಿಸಲಾಗಿದೆ. ಈ ಮೂವರು ಉತ್ತರ ಪ್ರದೇಶ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ. ಮೂವರು ಸೋಂಪುರ ಕೈಗಾರಿಕಾ ಪ್ರದೇಶದ ಮಾರುತಿ ಸುಜುಕಿ ಕಂಪನಿಯಲ್ಲಿ ಸೆಕ್ಯೂರಿಟಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಬೆಂಗಳೂರು| ಬೈಕ್ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್ ಬಂಧನ
ಮೆಲ್ನೋಟಕ್ಕೆ ಅಡುಗೆ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಡಾಬಸ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 70 ಪೆನ್ ಡ್ರೈವ್ ಬಳಕೆ – ಆಪ್ತ ವ್ಯಕ್ತಿಗಳಿಂದಲೇ ಪ್ರಜ್ವಲ್ ರೇವಣ್ಣಗೆ ಖೆಡ್ಡಾ

