ಧಾರವಾಡ: ಜಾಮೀನು ಪಡೆದು ನ್ಯಾಯಾಲಯಕ್ಕೆ (Court) ಹಾಜರಾಗದೇ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಪಾಲಿಕೆ ಮಾಜಿ ಸದಸ್ಯನನ್ನು ಧಾರವಾಡ (Dharwad) ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಶ್ರೀಕಾಂತ ಜಮನಾಳ ಎಂದು ಗುರುತಿಸಲಾಗಿದೆ. ಈತ ಸಿಜೆ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಸಿಸಿ ನಂ-317/2017 ರಲ್ಲಿ 2019 ರಲ್ಲಿ ಶಿಕ್ಷೆಗೆ ಗುರಿಯಾಗಿ, ಜಾಮೀನು ಪಡೆದುಕೊಂಡಿದ್ದ. ನಂತರ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡು ತಿರುಗಾಡುತ್ತಿದ್ದ. ಈತ ಈ ಹಿಂದೆ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡು, ಮಹಾನಗರ ಪಾಲಿಕೆ ಸದಸ್ಯ ಕೂಡ ಆಗಿದ್ದ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ
ಶ್ರೀಕಾಂತನ ಮೇಲೆ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಸದ್ಯ ಒಟ್ಟು 11-138 ಎನ್‌ಐ ಆ್ಯಕ್ಟ್ ಹಾಗೂ 1 ಕ್ರಿಮಿನಲ್ ಕೇಸ್ ಇದೆ. ಈತ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಕೂಡ ಆಗಿದ್ದಾನೆ. ಈತನನ್ನು ಪತ್ತೆ ಮಾಡುವ ಸಲುವಾಗಿ ಧಾರವಾಡ ಉಪನಗರ ಠಾಣೆ ಪೊಲೀಸರು ಸಾಕಷ್ಟು ಪ್ರಯತ್ನ ಪಡುತ್ತಿದ್ದರು. ಮಾ.15 ರಂದು ಧಾರವಾಡ ಉಪನಗರ ಪೊಲೀಸ್ ಠಾಣೆಯ ಪೊಲೀಸರು ಧಾರವಾಡ ನಗರದ ಹೊರವಲಯದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: 70 ಪೆನ್ ಡ್ರೈವ್ ಬಳಕೆ – ಆಪ್ತ ವ್ಯಕ್ತಿಗಳಿಂದಲೇ ಪ್ರಜ್ವಲ್ ರೇವಣ್ಣಗೆ ಖೆಡ್ಡಾ

