ನವದೆಹಲಿ/ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಹುದ್ದೆಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಹೆಸರು ಖಚಿತಗೊಂಡಿದೆ. ಈ ಹಿನ್ನೆಲೆ ತೆರವಾಗುವ ಕೆಪಿಸಿಸಿ ಅಧ್ಯಕ್ಷ (KPCC President) ಸ್ಥಾನಕ್ಕೆ ಯಾರು ಬರುತ್ತಾರೆ ಅನ್ನೋ ಕುತೂಹಲಕ್ಕೂ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ.
ಶಾಸಕಾಂಗ ಪಕ್ಷದ ನಾಯಕನಾಗುತ್ತಿದ್ದಂತೆ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅದರಿಂದ ತೆರವಾಗುವ ಸ್ಥಾನಕ್ಕೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರ ಹೆಸರು ಬಹುತೇಕ ಅಂತಿಮಗೊಂಡಿದೆ ಎಂದು ಪಕ್ಷದ ಆಪ್ತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್

ಸತೀಶ್ ಜಾರಕಿಹೊಳಿ ಅವರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಈಗಾಗಲೇ ಮಾತುಕತೆ ನಡೆಸಿದ್ದು, ಕೆಪಿಸಿಸಿ ಅಧ್ಯಕ್ಷರಾಗುವಂತೆ ಹೇಳಿದ್ದಾರೆ. ಆದ್ರೆ ಸತೀಶ್ ಜಾರಕಿಹೊಳಿ ಅವರು, ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಬೇಡಿಕೆಯಿಟ್ಟಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಾತುಕತೆ ನಡೆಸಿದಾಗಲೂ ಸತೀಶ್ ಜಾರಕಿಹೊಳಿ ಇದೇ ಪ್ರಸ್ತಾಪ ಇಟ್ಟಿದ್ದರು. ಆದ್ರೆ ಹೈಕಮಾಂಡ್ ಈ ಡಿಮ್ಯಾಂಡ್ ಒಪ್ಪುತ್ತಾ ಎಂಬುದನ್ನ ಕಾದುನೋಡಬೇಕಿದೆ. ಇದನ್ನೂ ಓದಿ: ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ – ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಐವರು ದುರ್ಮರಣ
