ಚಾಮರಾಜನಗರ/ಚಿಕ್ಕಮಗಳೂರು: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಹಲವು ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಜನ ಪರದಾಡುವಂತಾಗಿದೆ.
ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಗುಳ್ಯದಬಯಲಿನಲ್ಲಿ ಭಾರೀ ಮಳೆಯಾಗಿದೆ. ಪರಿಣಾಮ ಭಾಷಾ ಎಂಬುವವರಿಗೆ ಮನೆಗೆ ನೀರು ನುಗಿದ್ದು, ನೀರು ಹೊರಹಾಕಲು ಕುಟುಂಬಸ್ಥರು ರಾತ್ರಿಯಿಡಿ ಪರದಾಡಿದ್ದಾರೆ. ಜೊತೆಗೆ ಮನೆಯಲ್ಲಿದ್ದ ಧವಸಧಾನ್ಯಗಳಿಗೂ ನೀರು ಸೇರಿ, ಅಪಾರ ಪ್ರಮಾಣ ಹಾನಿಯುಂಟಾಗಿದೆ. ಇದನ್ನೂ ಓದಿ: ಎರಡು ತಿಂಗಳ ಗೃಹಲಕ್ಷ್ಮಿ ಬಾಕಿ ಬಗ್ಗೆ ಸ್ಪಷ್ಟನೆ ಕೊಡಿ – ಹಂಗಾಮಿ ಸಿಎಂಗೆ ಸುರೇಶ್ ಕುಮಾರ್ ಪತ್ರ
ಇನ್ನೂ ಚಿಕ್ಕಮಗಳೂರು (Chikkamagaluru) ನಗರದಲ್ಲಿ ರಾತ್ರಿ ಧಾರಾಕಾರ ಮಳೆಯಾಗಿದ್ದು, ನಗರದಾದ್ಯಂತ ನಾನಾ ಅವಾಂತರ ಸೃಷ್ಟಿಯಾಗಿದೆ. ಗಾಳಿ-ಮಳೆಗೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಕೋಟೆ ಬಡಾವಣೆಯಲ್ಲಿ ಮನೆಯ ಮೇಲ್ಛಾವಣಿಯ ಹೆಂಚುಗಳು ಹಾರಿ ಹೋಗಿದ್ದು, ಕೋರ್ಟ್ ಮುಂಭಾಗ ಹತ್ತಾರು ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.
ಇನ್ನೂ ಐಬಿ ಮುಂಭಾಗದ ಕಾಂಪೌಂಡ್ ಕೂಡ ಕುಸಿದಿದ್ದು, ಚಿಕ್ಕಮಗಳೂರು ನಗರದ ಅರ್ಧಭಾಗದಲ್ಲಿ ವಿದ್ಯುತ್ ಸಂಪರ್ಕ ಕಟ್ ಆಗಿದೆ. ಇದನ್ನೂ ಓದಿ: 2ನೇ ಬಾರಿಗೆ ದರ ಏರಿಕೆ ಬಿಸಿ – ಸಿಎನ್ಜಿ ಬೆಲೆ ಮತ್ತೆ 2 ರೂ. ಹೆಚ್ಚಳ
