ಟೆಹ್ರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೆರಿಕ (USA) ಈಗ ಕದನ ವಿರಾಮ ಘೋಷಣೆ ಮಾಡಿದೆ ಎಂದು ಇರಾನ್ (Iran) ಡೊನಾಲ್ಡ್ ಟ್ರಂಪ್‌ಗೆ (Donald Trump) ತಿರುಗೇಟು ನೀಡಿದೆ.
ಟ್ರಂಪ್ 5 ದಿನದ ಕದನ ವಿರಾಮ ಘೋಷಣೆ ಮಾಡಿದ್ದಕ್ಕೆ ಅಫ್ಘಾನಿಸ್ತಾನದಲ್ಲಿರುವ ಇರಾನ್ ರಾಯಭಾರ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಖಾರವಾಗಿ ಪ್ರತಿಕ್ರಿಯಿಸಿದೆ.
ಇರಾನ್‌ನ ಇಂಧನ ಮೂಲಸೌಕರ್ಯದ ಮೇಲೆ ಅಮೆರಿಕ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದೆ. ಒಂದು ವೇಳೆ ನಮ್ಮ ಮೂಲಸೌಕರ್ಯದ ಮೇಲೆ ದಾಳಿ ಮಾಡಿದರೆ ಇಡೀ ಪ್ರದೇಶದ ಮೂಲ ಸೌಕರ್ಯದ ಮೇಲೆ ದಾಳಿ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದೆವು. ಈ ಎಚ್ಚರಿಕೆ ನೀಡಿದ ಬೆನ್ನಲ್ಲೇ ಟ್ರಂಪ್ ದಾಳಿಯಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದೆ.
ಇರಾನಿನ ವಿದೇಶಾಂಗ ಸಚಿವ ಅರಾಘ್ಚಿ ಪ್ರತಿಕ್ರಿಯಿಸಿ, ನಾವು ಯಾವುದೇ ಶಾಂತಿ ಮಾತುಕತೆಯನ್ನು ನಡೆಸಿಲ್ಲ. ಈ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕಾದರೆ ನೀವು ಅಮೆರಿಕದ ಜೊತೆ ಮಾತನಾಡಿ ಎಂದು ಮಧ್ಯಪ್ರಾಚ್ಯ ದೇಶಗಳಿಗೆ ಸೂಚಿಸಿದ್ದಾರೆ.عقبنشینی ترامپ پس از هشدار قاطع ایران
پس از آنکه جمهوری اسلامی تهدید کرد که در صورت هرگونه حمله آمریکا به زیرساختهای انرژی ایران، زیرساختهای انرژی کل منطقه را هدف قرار میدهد، ترامپ عقب نشست و گفت که دستور تعویق حمله را صادر کرده است. pic.twitter.com/3Jcl3k5YDN
— Embassy of the I.R. Iran in Kabul, Afghanistan (@IRANinKabul) March 23, 2026
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ (Hormuz Strait) ತೆರೆಯದಿದ್ದರೆ ನಿಮ್ಮ ವಿದ್ಯುತ್ ಸ್ಥಾವರ ನಾಶ ಮಾಡುವುದಾಗಿ ಇರಾನಿಗೆ ಬೆದರಿಕೆ ಹಾಕಿದ್ದರು. ಈ ಡೆಡ್‌ಲೈನ್ ಒಳಗಡೆ ಇರಾನ್ ತೆರೆಯದೇ ಇದ್ದರೆ ದೊಡ್ಡ ಪ್ರಮಾಣದ ಯುದ್ಧ ನಡೆಯುವ ಸಾಧ್ಯತೆ ಇತ್ತು. ಇರಾನ್ ಬೆದರಿಕೆಗೆ ಜಗ್ಗದ ಕಾರಣ ದೊಡ್ಡ ಪ್ರಮಾಣದ ದಾಳಿ ನಡೆಯಬಹುದು ಎಂದು ಊಹಿಸುತ್ತಿದ್ದಾಗಲೇ ಟ್ರಂಪ್ 5 ದಿನದ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಇರಾನ್ ಯುದ್ಧ – ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ
ಫಲಪ್ರದವಾದ ಮಾತುಕತೆ ನಡೆದ ಹಿನ್ನೆಲೆಯಲ್ಲಿ ಇರಾನಿನ ವಿದ್ಯುತ್ ಸ್ಥಾವರಗಳು ಮತ್ತು ಇಂಧನ ಮೂಲಸೌಕರ್ಯಗಳ ಮೇಲಿನ ಎಲ್ಲಾ ಮಿಲಿಟರಿ ದಾಳಿಗಳನ್ನು ಐದು ದಿನಗಳ ಅವಧಿಗೆ ಮುಂದೂಡಲು ಸೂಚನೆ ನೀಡಿದ್ದೇನೆ. ಕದನ ವಿರಾಮ ಈಗ ನಡೆಯುತ್ತಿರುವ ಸಭೆ ಮತ್ತು ಚರ್ಚೆಗಳ ಯಶಸ್ಸಿಗೆ ಒಳಪಟ್ಟಿರುತ್ತದೆ ಎಂದು ಅವರು ಪೋಸ್ಟ್‌ನಲ್ಲಿ ತಿಳಿಸಿದ್ದರು.

