ಚಿಕ್ಕಮಗಳೂರು: ನಾಗಾಲ್ಯಾಂಡ್ (Nagaland) ಮೂಲದ ಯುವತಿಯೊಬ್ಬಳ ಶವ ಚಿಕ್ಕಮಗಳೂರಿನ (Chikkamagaluru) ಅರವಿಂದ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ. ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು ಎಂದು ತಿಳಿದು ಬಂದಿದೆ. ಯುವತಿ ಸಾವಿಗೂ ಮುನ್ನ ರಾಜೇಶ್ ಹಾಗೂ ತೇಜಸ್ ಎಂಬವರ ಹೆಸರನ್ನು ಡೈರಿಯಲ್ಲಿ ಬರೆದಿಟ್ಟಿದ್ದಾಳೆ. ಇದನ್ನೂ ಓದಿ: ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು
ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ಲಶಿಲಾ ಇಂಚುಗರ್ ಎಂಬವರು ಬಸವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಸವನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಎರಡು ಕುಟುಂಬದ ಮಧ್ಯೆ ಆಸ್ತಿ ವೈಷಮ್ಯ – ಅಪ್ರಾಪ್ತನಿಂದ ವ್ಯಕ್ತಿಯ ಕೊಲೆ

