ಕಾರವಾರ: ಮಾಜಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ (Congress) ಮುಖಂಡ ಗೋಪಾಲಕೃಷ್ಣ ನಾಯ್ಕ ಅವರ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಂಕೋಲದ (Ankola) ಕೇಣಿ ಬಳಿ ಈ ದಾಳಿ ನಡೆದಿದೆ.
ಅಂಕೋಲದ ಕೇಣಿ ಬಳಿ ಕಾರಿನಲ್ಲಿ ತೆರಳುತಿದ್ದಾಗ ಗೋವಾ ನೋಂದಣಿಯ ಕಾರಿನಲ್ಲಿ ಬಂದು ಅಡ್ಡಗಟ್ಟಿದ ಕಿಡಿಗೇಡಿಗಳು ರಾಡ್ ನಿಂದ ಹೊಡೆದು ಚಾಕು ಇರಿದಿದ್ದಾರೆ. ಅವರ ತಲೆಗೆ, ಕುತ್ತಿಗೆಗೆ ಪೆಟ್ಟಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಅಂಕೋಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ
ಅಂಕೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮುಳಬಾಗಿಲು | ಮನೆ ಕುಸಿದು ಬಾಲಕಿ ಸಾವು – ನಾಲ್ವರಿಗೆ ಗಂಭೀರ ಗಾಯ

