ಬೀದರ್: ಜಿಲ್ಲೆಯಲ್ಲಿ ಚಿನ್ನಾಭರಣ ಕಳ್ಳತನ, ಗಾಂಜಾ ಸಾಗಾಟದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿ, 69 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಹೈದ್ರಾಬಾದ್ನಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. 83 ಕೆ.ಜಿ 670 ಗ್ರಾಂನ ಒಟ್ಟು 41 ಲಕ್ಷ ರೂ.ಗೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಓರ್ವ ಆರೋಪಿ ಬಂಧಿಸಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಈ ಕುರಿತು ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯುದ್ಧ ನಿಲ್ಲಿಸಲು ಟ್ರಂಪ್ ಹಾಕಿರೋ 15 ಅಂಶಗಳ ಅಜೆಂಡಾ ಏನು..? – ಸಂಧಾನ ಮಾತುಕತೆಗೆ 1 ತಿಂಗಳ ಕದನ ವಿರಾಮ

ಇನ್ನೂ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಅಂತರ ರಾಜ್ಯ ಖದೀಮರನ್ನು ಹೆಡೆಮುರಿ ಕಟ್ಟುವಲ್ಲಿ ಬೀದರ್ ಪೊಲೀಸರು (Bidar Police) ಯಶಸ್ವಿಯಾಗಿದ್ದಾರೆ. 320 ಗ್ರಾಂ ಚಿನ್ನಾಭರಣಗಳು ಮತ್ತು 690 ಬೆಳ್ಳಿಯ ಆಭರಣಗಳು ಸೇರಿದಂತೆ ಒಟ್ಟು 28 ಲಕ್ಷ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
ಚಿನ್ನಾಭರಣ ಕಳ್ಳತನ ಮಾಡಿ, ಬಳಿಕ ಖದೀಮರು ಚಿನ್ನದಂಗಡಿಗೆ ಮಾರಾಟ ಮಾಡಿದ್ದರು. ಬೀದರ್ ಪೊಲೀಸರು ಮಹಾರಾಷ್ಟ್ರಕ್ಕೆ ಹೋಗಿ ಕಾರ್ಯಾಚರಣೆ ಮಾಡಿದ್ದು, ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.ಇದನ್ನೂ ಓದಿ: ಮತ್ತೆ ಚಿನ್ನದ ದರ ಜಿಗಿತ – ಆಭರಣ ಪ್ರಿಯರಲ್ಲಿ ಕರಗಿದ ಮಂದಹಾಸ

