ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ ಶ್ರೀ ರಾಮನವಮಿಯನ್ನ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಗರದ ರಾಮ ಮಂದಿರ, ಕೋದಂಡರಾಮ ದೇವಾಲಯ ಸೇರಿದಂತೆ ರಾಮನ ದೇವಾಲಯಗಳಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ.
ನಗರದ ರಾಮ ಮಂದಿರದಲ್ಲಿ ರಾಮ ಉತ್ಸವಕ್ಕೆ ಸಿದ್ಧತೆ ನಡೆದಿದೆ. ಕೋದಂಡರಾಮ ದೇವಾಲಯದಲ್ಲಿ ರಾಮನ ರಥೋತ್ಸವ ಜರುಗಿತು. ಭಕ್ತರು ರಥೋತ್ಸವದಲ್ಲಿ ಭಾಗವಹಿಸಿ, ತಮ್ಮ ಹರಕೆಯನ್ನು ತೀರಿಸಿದರು. ಇದನ್ನೂ ಓದಿ: ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ
ಮಧ್ಯಾಹ್ನ ಭಕ್ತರಿಗೆ ಪಾನಕ, ಪ್ರಸಾದ, ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬಿಸಿಲಿನ ತಾಪಮಾನ ಹೆಚ್ಚಾಗಿರುವ ಹಿನ್ನೆಲೆ ಭಕ್ತರಿಗಾಗಿ ಕೋದಂಡರಾಮ ದೇವಾಲಯ ವತಿಯಿಂದ ಉಚಿತ ವೈದ್ಯಕೀಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿದೆ.

