ಚಿಕ್ಕಮಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರಿಗೆ ಅಗಾಧವಾದ ರಾಜಕೀಯದ ಅನುಭವ ಹುಮ್ಮಸ್ಸು ಹಾಗೂ ಹುರುಪು ಇದೆ. ಆದರೆ ಕೊರತೆ ಇರುವುದು ಇಚ್ಚಾಶಕ್ತಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ (CT Ravi) ಶುಭಹಾರೈಸುವುದರ ಜೊತೆ ಕಿವಿಮಾತು ಕೂಡ ಹೇಳಿದ್ದಾರೆ.
ಇಂದು ಡಿಸಿಸಿ ಬ್ಯಾಂಕಿನಲ್ಲಿ ಮಾತನಾಡಿದ ಅವರು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಅಭಿನಂದನೆ ಸಲ್ಲಿಸುವುದರ ಜೊತೆ ಕೆಲ ಸಲಹೆಗಳನ್ನು ನೀಡಿದ್ದಾರೆ. ವೈಯಕ್ತಿಕ ರಾಜಕಾರಣ ಹಿತಾಸಕ್ತಿ ಹಾಗೂ ಪಕ್ಷದ ಹಿತಾಸಕ್ತಿಗಿಂತ ರಾಜ್ಯದ ಹಿತವೇ ಮುಖ್ಯ ಎಂಬ ಆದ್ಯತೆ ಅವರದಾದರೆ ಮಾತ್ರ ಉತ್ತಮ ಕೆಲಸ ಮಾಡಲು ಸಾಧ್ಯ. ಇಲ್ಲದಿದ್ದರೆ ಜನ ಯಾವುದೇ ನಿರೀಕ್ಷೆ ಇಟ್ಟುಕೊಳ್ಳಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಬಿಗ್ ಬಾಸ್ ಸೀಸನ್ 13 – ಈ ವರ್ಷ ಬೇಗ ಶುರುವಾಗ್ತಿದೆ ಕನ್ನಡಿಗರ ಹಬ್ಬ
ನೂತನ ಮುಖ್ಯಮಂತ್ರಿಯವರ ಆದ್ಯತೆಗಳು ಸದಾ ರಾಜ್ಯದ ಹಿತಾಸಕ್ತಿ ಮತ್ತು ಅಭಿವೃದ್ಧಿಗೆ ಪೂರಕವಾಗಿರಲಿ. ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ದೂರದೃಷ್ಟಿಯ ಯೋಜನೆಗಳು ಜಾರಿಗೆ ಬರಬೇಕು ಮತ್ತು ಯಾವುದೇ ಕಾರಣಕ್ಕೂ ಸಾಮಾಜಿಕ ಅನ್ಯಾಯವಾಗದಂತೆ ಆಡಳಿತ ನಡೆಸಬೇಕು ಎಂದು ಹೇಳಿದರು. ಇದನ್ನೂ ಓದಿ: ರಾಜ್ಯಾದ್ಯಂತ 10,000 ಭಾರತ್ ಜೋಡೋ ಯುವಕರ ಸಂಘ ಸ್ಥಾಪನೆ – ಪ್ರತಿ ಸಂಘಕ್ಕೆ 10 ಲಕ್ಷ ರೂ.: ಸಿಎಂ ಡಿಕೆಶಿ
ರಾಜಕೀಯ ಹಿತಾಸಕ್ತಿ ಯಾವತ್ತು ರಾಜ್ಯದ ಹಿತವನ್ನ ಮೀರಬಾರದು. ಕಾಂಗ್ರೆಸ್ (Congress) ಎಲ್ಲಿವರೆಗೆ ತನ್ನ ನೀತಿ ಬದಲಿಸಿಕೊಳ್ಳುವುದಿಲ್ಲವೋ ಅಲ್ಲಿವರೆಗೆ ತುಷ್ಟೀಕರಣ ರಾಜಕಾರಣ ಮುಂದುವರಿಯುತ್ತಲೇ ಇರುತ್ತದೆ. ಕೇವಲ ಹಣವೇ ಪ್ರಧಾನವಾದಾಗ ಆಡಳಿತದಲ್ಲಿ ಬಿಗಿ ತಪ್ಪುವುದು ಸಹಜ. ಹಾಗಾಗದಂತೆ ಎಚ್ಚರ ವಹಿಸಿ ನೂತನ ಮುಖ್ಯಮಂತ್ರಿಗಳು ಜನರ ಮನ್ನಣೆ ಗಳಿಸಲಿ ಎಂದು ಶುಭ ಹಾರೈಸಿದರು. ಇದನ್ನೂ ಓದಿ: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ – ಸಿಎಂ ಆಗಿ ಡಿಕೆಶಿ ಮೊದಲ ಘೋಷಣೆ
