Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
Last updated: March 29, 2026 12:33 pm
Public TV
Share
3 Min Read
Siddaramaiah 4
SHARE

– ಕರ್ನಾಟಕ ಪೊಲೀಸ್ ಅಕಾಡೆಮಿ ಸಿಬ್ಬಂದಿಗೆ 2 ಲಕ್ಷ ರೂ. ಬಹುಮಾನ ಘೋಷಣೆ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು (Police) ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡ ಸಿಎಂ, ಎಲ್ಲರಿಗೂ ವೃತ್ತಿಪರ ಯಶಸ್ಸನ್ನು ಕೋರಿ ಶುಭಹಾರೈಸಿ ಮಾತನಾಡಿದರು. ಇದನ್ನೂ ಓದಿ: ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

CM Siddaramaiah Mysuru Karnataka Police

ಎಲ್ಲರಿಗೂ ರಕ್ಷಣೆ, ಸಮಾನ ಅವಕಾಶಗಳು ದೊರೆಯಬೇಕು:
ಪೊಲೀಸ್ ಸೇವೆಯಲ್ಲಿ ಶಿಸ್ತು ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ಜಾತಿ ವ್ಯವಸ್ಥೆಯಿದ್ದು, ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ. ಮಧ್ಯರಾತ್ರಿಯಲ್ಲಿ ಮಹಿಳೆಯರು ನಿರ್ಭೀತಿಯಿಂದ ಓಡಾಡುವಂತಾದಾಗ ಮಾತ್ರ, ನಿಜಅರ್ಥದಲ್ಲಿ ಸ್ವಾತಂತ್ರ‍್ಯ ದೊರೆತಂತೆ ಎಂದು ಮಹಾತ್ಮ ಗಾಂಧಿಯವರು ಹೇಳಿದ್ದರು. ಸಮಾಜದ ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಸಮಾನತೆ ದೊರೆಯಬೇಕು. ಆದ್ದರಿಂದ ನ್ಯಾಯವನ್ನು ಎತ್ತಿಹಿಡಿಯುವ ಕೆಲಸದಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು. ಎಲ್ಲರಿಗೂ ರಕ್ಷಣೆ, ಸಮಾನ ಅವಕಾಶಗಳು ದೊರೆಯಬೇಕು. ಪೊಲೀಸರು ಸರ್ಕಾರದ ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸಬೇಕಲ್ಲದೇ, ಕಾನೂನು ಸುವ್ಯವಸ್ಥೆಯನ್ನು ಕಾಯುವಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದರು. ಇದನ್ನೂ ಓದಿ: ನಡೆದುಕೊಂಡು ಹೋಗುತ್ತಿದ್ದವರಿಗೆ ಥಾರ್ ಡಿಕ್ಕಿ – ಅಜ್ಜ, ಇಬ್ಬರು ಮೊಮ್ಮಕ್ಕಳು ದುರ್ಮರಣ

377 ಸಬ್ ಇನ್ಸ್ಪೆಕ್ಟರ್ ಗಳು ಸೇವೆಗೆ ಸೇರ್ಪಡೆ:
ತರಬೇತಿಯಲ್ಲಿ ಕಲಿತಿದ್ದನ್ನು ಜ್ಞಾಪಕವಿಟ್ಟುಕೊಂಡು ಜೀವನದಲ್ಲಿ ಪಾಲಿಸಬೇಕು. ತರಬೇತಿಗಳು ಆಗಾಗ್ಗೆ ನಡೆಯಬೇಕಲ್ಲದೆ ತರಬೇತಿ ಜೀವನದ ಅಂಗವಾಗಬೇಕು. 377 ಸಬ್ ಇನ್ಸ್‌ಪೆಕ್ಟರ್‌ಗಳು ಸೇವೆಗೆ ಸೇರ್ಪಡೆಯಾಗುತ್ತಿದ್ದು, ಖಾಲಿಯಿದ್ದ 4,911 ಹುದ್ದೆಗಳನ್ನು ಮೂರು ವರ್ಷಗಳಲ್ಲಿ ಭರ್ತಿ ಮಾಡಲಾಗಿದೆ. ಖಾಲಿ ಇರುವ 8,000 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ. ಅದನ್ನು ಮಾಡಿಯೇ ತೀರುತ್ತೇವೆ. ಸರ್ಕಾರ ಸದಾ ನಿಮ್ಮೊಂದಿಗಿರುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌, ಪೈನ್‌ ಗ್ಯಾಸ್‌ ಹೊತ್ತ ಮತ್ತೆರಡು ಹಡಗು

CM Siddaramaiah Mysuru Karnataka Police 1

ಅಭಿವೃದ್ಧಿ ಕೆಲಸಗಳಿಗೆ ಹಿಂಜರಿಕೆಯಿಲ್ಲ:
ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವಾಗ ಸರ್ಕಾರ ಹಿಂದೆಮುಂದೆ ನೋಡುವುದಿಲ್ಲ. ಕೆಲಸದಲ್ಲಿರುವ ಸಂದರ್ಭದಲ್ಲಿ ಕುಟುಂಬದವರ ಯೋಚನೆ ಮಾಡುವ ಅಗತ್ಯವಿಲ್ಲ. ಸತ್ಯ, ನಿಷ್ಠೆಯಿಂದ ಸೇವೆ ಸಲ್ಲಿಸುತ್ತೀರಿ ಎಂದು ನಂಬಿರುವುದಾಗಿ ಹೇಳಿದರು. ಇದನ್ನೂ ಓದಿ: ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಕೊಲೆ ಮಾಡಿ ಸುಟ್ಟು ಬಿಸಾಕಿರುವ ಶಂಕೆ

ಮಾದಕವಸ್ತು ಮುಕ್ತ ಸಮಾಜ ನಿರ್ಮಾಣ:
ಮಾದಕವಸ್ತು ಮುಕ್ತ ಸಮಾಜ ನಿರ್ಮಾಣ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದ್ದು, ಆ ದಿಕ್ಕಿನಲ್ಲಿ ಆರಕ್ಷಕರು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಮಾದಕವಸ್ತು ತಯಾರಕರು, ಮಾರಾಟ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕು. ಯುವ ಜನಾಂಗದ ಮೇಲೆ ಮಾದಕ ವಸ್ತುಗಳ ಪರಿಣಾಮ ಮಾರಕವಾಗುತ್ತದೆ. ಇದನ್ನು ನಿರ್ಮೂಲನೆ ಮಾಡದೆ ಹೋದರೆ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯವಿಲ್ಲ. ಆದ್ದರಿಂದ ಈ ದಿಕ್ಕಿನಲ್ಲಿ ಪ್ರಾಮಾಣಿಕ ಪ್ರಯತ್ನ ಅಗತ್ಯ ಎಂದರು. ಇದನ್ನೂ ಓದಿ: ವಾರದಲ್ಲಿ ಆಟೋ LPG ದರ 30 ರಿಂದ 40 ರೂ. ಏರಿಕೆ – ಕಲಬುರಗಿಯಲ್ಲಿ ಚಾಲಕರ ಆಕ್ರೋಶ

CM Siddaramaiah Mysuru Karnataka Police 2

ಮಾನವೀಯತೆಯಿಂದ ಕೆಲಸ ಮಾಡಬೇಕು:
ಪೊಲೀಸರು ಮಾನವೀಯತೆಯಿಂದ ಕೆಲಸ ಮಾಡಬೇಕು. ಸಾರ್ವಜನಿಕರ ಜೊತೆಗೆ ಸ್ನೇಹದಿಂದ ಇರಬೇಕು. ಅಪರಾಧಿಗಳಿಗೆ ಕರುಣೆ ತೋರಬೇಕಿಲ್ಲ. ನಿರಪರಾಧಿಗಳಿಗೆ ಕರುಣೆ ತೋರಬೇಕು ಎಂದು ನುಡಿದರು. ಇದನ್ನೂ ಓದಿ: 80 ಲಕ್ಷ ಜನರಿಂದ ʻNo Kingsʼ ಚಳವಳಿ – ಅಮೆರಿಕದಲ್ಲಿ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಸೈಬರ್ ಅಪರಾಧಗಳನ್ನು ನಿಗ್ರಹಿಸಲು ಸೂಕ್ತ ತರಬೇತಿ ನೀಡಿದ್ದು, ಅವುಗಳನ್ನು ಬಳಕೆ ಮಾಡಿಕೊಳ್ಳಬೇಕು. ಸಮಾಜದ ದುರ್ಬಲ ವರ್ಗದವರನ್ನು ಮುಖ್ಯವಾಹಿನಿಗೆ ತರಬೇಕು ಎಂದರು. ಇದನ್ನೂ ಓದಿ: ಬೆಂಗಳೂರು ಅಭಿವೃದ್ಧಿಗೆ 20,213 ಕೋಟಿ ಬಜೆಟ್ – 5 ನಗರ ಪಾಲಿಕೆಗಳಿಗೂ ಪ್ರತ್ಯೇಕ ಆಯವ್ಯಯ ಮಂಡನೆ

CM Siddaramaiah Mysuru Karnataka Police

ಧೈರ್ಯದಿಂದ ಕೆಲಸ ಮಾಡಬೇಕು:
ಬಲಾಢ್ಯರ ಕೈಯಲ್ಲಿ ಅಧಿಕಾರವಿದ್ದರೆ ಸಮಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಶ್ರೀಮಂತರು ಹಣಬಲದಿಂದ ದುರುಪಯೋಗ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಾರೆ. ಅಂಥ ಆಮಿಷಗಳಿಗೆ ಒಳಗಾಗಬಾರದು. ಧೈರ್ಯದಿಂದ ಕೆಲಸ ಮಾಡಿ ಪೋಲಿಸ್ ವೃತ್ತಿಯಲ್ಲಿ ಯಶಸ್ವಿಯಾಗಬೇಕು ಎಂದು ಕಿವಿ ಮಾತು ಹೇಳಿದರು. ಇದನ್ನೂ ಓದಿ: ಮೈಸೂರಲ್ಲಿ ಸಿಕ್ಕ 12 ಕೋಟಿ ಮೌಲ್ಯದ ಡ್ರಗ್ಸ್‌ಗೆ ಮುಂಬೈ ನಂಟು

TAGGED:congressKarnataka policeKarnataka Police Acadamymysurusiddaramaiahಕರ್ನಾಟಕ ಪೊಲೀಸ್ಪೊಲೀಸರುಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
37 minutes ago
Alok Kumar
Bengaluru City

`ಜೈಲಲ್ಲಿ ಮೊಬೈಲ್ ಕೊಟ್ಟಿದ್ದೇ ಅಲೋಕ್ ಕುಮಾರ್’ – ವಿಡಿಯೋ ಮಾಡಿ ಹರಿಬಿಟ್ಟಿದ್ದ ವಿಚಾರಣಾಧೀನ ಕೈದಿಗಳು

Public TV
By Public TV
49 minutes ago
Kolara 3
Districts

ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

Public TV
By Public TV
1 hour ago
Gurugram Thar Accident Kills Garndfather and grandsons
Crime

ನಡೆದುಕೊಂಡು ಹೋಗುತ್ತಿದ್ದವರಿಗೆ ಥಾರ್ ಡಿಕ್ಕಿ – ಅಜ್ಜ, ಇಬ್ಬರು ಮೊಮ್ಮಕ್ಕಳು ದುರ್ಮರಣ

Public TV
By Public TV
2 hours ago
indian LPG Tankers
Latest

ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌, ಪೈನ್‌ ಗ್ಯಾಸ್‌ ಹೊತ್ತ ಮತ್ತೆರಡು ಹಡಗು

Public TV
By Public TV
2 hours ago
Gadag Youth Suspected Death
Crime

ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಕೊಲೆ ಮಾಡಿ ಸುಟ್ಟು ಬಿಸಾಕಿರುವ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?