Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏ.1ರಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಜಯಂತ್ಯೋತ್ಸವ – ರಾಷ್ಟ್ರಪತಿ ಮುರ್ಮು ಆಗಮನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಏ.1ರಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಜಯಂತ್ಯೋತ್ಸವ – ರಾಷ್ಟ್ರಪತಿ ಮುರ್ಮು ಆಗಮನ

Districts

ಏ.1ರಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಜಯಂತ್ಯೋತ್ಸವ – ರಾಷ್ಟ್ರಪತಿ ಮುರ್ಮು ಆಗಮನ

Public TV
Last updated: March 30, 2026 8:28 am
Public TV
Share
2 Min Read
Siddaganga Math Droupadi Murmu
SHARE

– ಶ್ರೀಗಳ ಲಿಂಗೈಕ್ಯ ದಿನ ದಾಸೋಹ ದಿನ ಮಾಡಲು ಒತ್ತಾಯ

ತುಮಕೂರು: ಏಪ್ರಿಲ್ 1ರಂದು ತ್ರಿವಿಧ ದಾಸೋಹಿ, ಶತಾಯುಷಿ ಸಿದ್ದಗಂಗಾ ಮಠದ (Siddaganga Math) ಶಿವೈಕ್ಯ ಶಿವಕುಮಾರ ಮಹಾಶಿವಯೋಗಿಗಳ 119ನೇ ಜನ್ಮದಿನೋತ್ಸವ ಅದ್ದೂರಿಯಾಗಿ ನಡೆಯಲಿದೆ. ಈ ಅಭೂತಪೂರ್ವ ಕ್ಷಣಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಸಾಕ್ಷಿಯಾಗಲಿದ್ದಾರೆ. ಇನ್ನೊಂದು ಕಡೆ ಶ್ರೀಗಳ ಪುಣ್ಯ ಸ್ಮರಣೆ ದಿನವನ್ನು ದಾಸೋಹ ದಿನವನ್ನಾಗಿ ಘೋಷಿಸುವಂತೆ ಒತ್ತಾಯ ಕೇಳಿಬಂದಿದೆ.

ನಡೆದಾಡುವ ದೇವರು ಎಂದೇ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿದುಕೊಂಡಿರುವ ಸಿದ್ದಗಂಗಾ ಮಠದ ಶಿವೈಕ್ಯ ಶಿವಕುಮಾರ ಮಹಾಶಿವಯೋಗಿಗಳ (Shivakumara Swamiji) 119ನೇ ಜನ್ಮದಿನೋತ್ಸವ ಇದೇ ಏಪ್ರಿಲ್ 1ರಂದು ನಡೆಯಲಿದೆ. ಈ ಧಾರ್ಮಿಕ ಕೈಂಕರ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಾಕ್ಷಿಯಾಗಲಿದ್ದಾರೆ. ಆ ದಿನ ಪ್ರಾತಃ ಕಾಲದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನಡೆಯಲಿದೆ. ವಿವಿಧ ಮಠ ಮಾನ್ಯಗಳ ಸಾಧು ಸಂತರ ಮಂತ್ರಘೋಷಗಳೊಂದಿಗೆ ಪೂಜಾ ಕೈಂಕರ್ಯ ನೆರವೇರಲಿದೆ. ರಾಷ್ಟ್ರಪತಿಗಳು ಅಂದು ಬೆಳಗ್ಗೆ 10:30ಕ್ಕೆ ಸಿದ್ದಗಂಗಾ ಮಠಕ್ಕೆ ಆಗಮಿಸಲಿದ್ದಾರೆ. ಆರಂಭದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಆರತಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಶ್ರೀ ಮಠದ 10 ಸಾವಿರ ವಿದ್ಯಾರ್ಥಿಗಳನ್ನು ನೋಡಿ ಚುಟುಕಾಗಿ ಮಾತನಾಡಲಿದ್ದಾರೆ. ಬಳಿಕ ಉದ್ದಾನಶ್ರೀ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದೂ ಮಳೆ ಸಾಧ್ಯತೆ

Siddaganga Mutt

ಇನ್ನು, ರಾಷ್ಟ್ರಪತಿಗಳು ಕಾರ್ಯಕ್ರಮಕ್ಕೆ ಬರುವ ಹಿನ್ನೆಲೆ ಝಡ್+ ಸೆಕ್ಯೂರಿಟಿ ಇರಲಿದೆ. ಹಾಗಾಗಿ ಭಕ್ತಾದಿಗಳು ಯಾರೂ ವೇದಿಕೆ ಕಾರ್ಯಕ್ರಮಕ್ಕೆ ನೀರಿನ ಬಾಟಲ್, ಕೊಡೆಯನ್ನು ತರಬಾರದು ಎಂದು ಸಿದ್ದಲಿಂಗ ಸ್ವಾಮಿಗಳು ಮನವಿ ಮಾಡಿದ್ದಾರೆ. ಇದರ ನಡುವೆ ಶಿವಕುಮಾರ ಶ್ರೀಗಳು ಲಿಂಗೈಕೈರಾದ ದಿನವನ್ನು ದಾಸೋಹ ದಿನವನ್ನಾಗಿ ಆಚರಣೆಗೆ ತರುವಂತೆ ಭಕ್ತಾದಿಗಳಿಂದ ಅಭಿಮತ ಬಂದಿದೆ. ಇದರಂತೆ ಕೇಂದ್ರ ಸಚಿವ ವಿ ಸೋಮಣ್ಣ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಏ.1ರಂದು ಶಿವಕುಮಾರ ಶ್ರೀಗಳ ಜನ್ಮ ದಿನೋತ್ಸವದಂದೇ ದಾಸೋಹ ದಿನದ ಆಚರಣೆ ಬಗ್ಗೆ ಅಧಿಕೃತ ಆದೇಶ ಹೊರಡಿಸುವಂತೆ ಸಿಎಂಗೆ ಪತ್ರ ಬರೆದಿದ್ದಾರೆ. ಶಿವಕುಮಾರ ಮಹಾ ಶಿವಯೋಗಿಗಳು ಜನವರಿ 21ರಂದು ಲಿಂಗೈಕೈರಾಗಿದ್ದು, ಆ ದಿನವನ್ನು ದಾಸೋಹ ದಿನ ಎಂದು ಆಚರಣೆ ಮಾಡಲಾಗುವುದು ಎಂದು ಅಂದಿನ ಬೊಮ್ಮಾಯಿ ಸರ್ಕಾರ ಘೋಷಣೆ ಮಾಡಿತ್ತು. ಅದು ಈವರೆಗೂ ಕಾರ್ಯರೂಪಕ್ಕೆ ಬಂದಿರಲಿಲ್ಲ. ಇದನ್ನೂ ಓದಿ: ತಮಿಳುನಾಡು, ಅಸ್ಸಾಂನಲ್ಲಿ ಗ್ಯಾರಂಟಿ ಭರಾಟೆ – ಮಹಿಳೆಯರಿಗೆ ಬಂಪರ್‌, ಪ್ರಣಾಳಿಕೆಯಲ್ಲಿ ಏನಿದೆ?

ಒಟ್ಟಾರೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದರಿಂದ ಸ್ವಲ್ಪ ಚುಟುಕಾಗಿ ಕಾರ್ಯಕ್ರಮ ಮಾಡಲು ಮಠ ನಿರ್ಧರಿಸಿದೆ. ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬರುವ ನಿರೀಕ್ಷೆ ಇದೆ. ಇದನ್ನೂ ಓದಿ: ಏ.1 ರಿಂದ ಐತಿಹಾಸಿಕ ಬೆಂಗಳೂರು ಕರಗ – ಕಣ್ಮನ ಸೆಳೆಯುತ್ತಿದೆ ದೀಪಾಲಂಕಾರ

TAGGED:Droupadi Murmushivakumara swamijiSiddaganga Mathtumakuruತುಮಕೂರುದ್ರೌಪದಿ ಮುರ್ಮುಶಿವಕುಮಾರ ಸ್ವಾಮೀಜಿಸಿದ್ದಗಂಗಾ ಮಠ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
1 minute ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
28 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
48 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
1 hour ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
2 hours ago
Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?