ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿಯೂ ಸಹ (Bengaluru) ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಉಳಿದ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಬೆಳಗಾವಿ, ಬಾಗಲಕೋಟೆ, ರಾಯಚೂರು ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಕರ್ನಾಟಕಕ್ಕೆ ಮುಂಗಾರು ಎಂಟ್ರಿ: ರಾಜ್ಯಾದ್ಯಂತ ವರುಣನ ಅಬ್ಬರ, ಧರೆಗುರುಳಿದ ಮರ ಜನಜೀವನ ಅಸ್ತವ್ಯಸ್ತ!
ಗಾಳಿಯ ಗಂಟೆಗೆ 40-50 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ರಾಜ್ಯದ ಹಲವೆಡೆ ಮುಂಗಾರು ಅಬ್ಬರ; ಸೋರುತಿದೆ ಆಸ್ಪತ್ರೆ, ಸರ್ಕಾರಿ ಶಾಲೆ ಜಲಾವೃತ – ಎಲ್ಲೆಲ್ಲಿ ಏನಾಗಿದೆ?
ಎಷ್ಟು ಮಳೆಯಾಗುತ್ತೆ?
64.5 ಮಿ.ಮೀ ನಿಂದ 115.5 ಮಿ.ಮೀ ಒಳಗಡೆ ಮಳೆಯಾಗುವ ಸಾಧ್ಯತೆ ಇದ್ದರೆ ಯೆಲ್ಲೋ ಅಲರ್ಟ್ ಘೋಷಣೆಯಾಗುತ್ತದೆ. 115.6 ಮಿ.ಮೀ ನಿಂದ 204.4 ಮಿ.ಮೀ. ಒಳಗಡೆ ಮಳೆಯಾಗಲಿದ್ದರೆ ಆರೆಂಜ್ ಅಲರ್ಟ್ ಎಂದು ಪ್ರಕಟಿಸಲಾಗುತ್ತದೆ. 204.5 ಮಿ.ಮೀಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದರೆ ರೆಡ್ ಅಲರ್ಟ್ ಘೋಷಣೆ ಮಾಡಲಾಗುತ್ತದೆ.

