ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) 5.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿಯಾಗಿದೆ.
ಬೆಳ್ಳಂಬೆಳಿಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಒಟ್ಟು 5.87 ಕೋಟಿ ರೂ. ಮೌಲ್ಯದ 16 ಕೆಜಿ 880 ಗ್ರಾಂ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: 7 ಪ್ರಕರಣಗಳಲ್ಲಿ ವಾಂಟೆಡ್ – ತಲೆಮರೆಸಿಕೊಂಡಿದ್ದ ಟಿಎಂಸಿ ನಾಯಕ ನೇಪಾಳ ಗಡಿಯಲ್ಲಿ ಅರೆಸ್ಟ್
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೋಟ್ಯಂತರ ರೂ. ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ವಶಪಡಿಸಿಕೊಂಡಿದ್ದು, ಇಬ್ಬರು ಪ್ರಯಾಣಿಕರ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
