ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಹಲವೆಡೆ ಮಳೆಯಾಗುತ್ತಿದೆ. ಮುಂದಿನ ಐದು ದಿನ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಳಗಾವಿ, ರಾಯಚೂರು, ಕಲ್ಬುರ್ಗಿ, ಕೊಪ್ಪಳ, ಹುಬ್ಬಳ್ಳಿ ಧಾರವಡ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಮಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 28-22
ಮಂಗಳೂರು: 27-26
ಶಿವಮೊಗ್ಗ: 27-22
ಬೆಳಗಾವಿ: 26-22
ಮೈಸೂರು: 28-23

ಮಂಡ್ಯ: 28-23
ಮಡಿಕೇರಿ: 23-21
ರಾಮನಗರ: 29-23
ಹಾಸನ: 27-21
ಚಾಮರಾಜನಗರ: 28-23
ಚಿಕ್ಕಬಳ್ಳಾಪುರ: 28-21

ಕೋಲಾರ: 29-22
ತುಮಕೂರು: 28-22
ಉಡುಪಿ: 28-25
ಕಾರವಾರ: 28-27
ಚಿಕ್ಕಮಗಳೂರು: 23-19
ದಾವಣಗೆರೆ: 28-23

ಹುಬ್ಬಳ್ಳಿ: 27-23
ಚಿತ್ರದುರ್ಗ: 28-23
ಹಾವೇರಿ: 27-23
ಬಳ್ಳಾರಿ: 32-25
ಗದಗ: 27-22
ಕೊಪ್ಪಳ: 30-23

ರಾಯಚೂರು: 34-26
ಯಾದಗಿರಿ: 34-26
ವಿಜಯಪುರ: 31-24
ಕಲಬುರಗಿ: 33-25
ಬಾಗಲಕೋಟೆ: 30-24


