ಚಂಡೀಗಢ: ಪಂಜಾಬ್ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ(Afghanistan) ವಿರುದ್ಧದ ಏಕೈಕ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಇನ್ನಿಂಗ್ಸ್ ಹಾಗೂ 300 ರನ್‌ಗಳ ಭರ್ಜರಿ ಜಯ ದಾಖಲಿಸಿದೆ.
ಭಾರತೀಯ ಬೌಲರ್‌ಗಳ ಮಾರಕ ದಾಳಿಗೆ ನಲುಗಿದ ಅಫ್ಘಾನಿಸ್ತಾನ ಒಂದೇ ದಿನ ಬರೋಬ್ಬರಿ 15 ವಿಕೆಟ್ ಕಳೆದುಕೊಂಡು ಹೀನಾಯ ಸೋಲೊಪ್ಪಿಕೊಂಡಿತು. ಈ ಮೂಲಕ ಮೂರೇ ದಿನಕ್ಕೆ ಪಂದ್ಯ ಮುಕ್ತಾಯಗೊಂಡಿದೆ.
ಪಂದ್ಯದ ಮೂರನೇ ದಿನವಾದ ಇಂದು ಅಫ್ಘಾನಿಸ್ತಾನದ ಬ್ಯಾಟಿಂಗ್ ಲೈನಪ್ ಸಂಪೂರ್ಣವಾಗಿ ಧೂಳೀಪಟವಾಯಿತು. ಎರಡನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿದ್ದ ಅಫ್ಘಾನ್, ಇಂದು ಬೆಳಗ್ಗಿನ ಅವಧಿಯಲ್ಲಿ ಕೇವಲ 39 ರನ್ ಸೇರಿಸುವಷ್ಟರಲ್ಲಿ ಉಳಿದ 5 ವಿಕೆಟ್‌ಗಳನ್ನು ಕಳೆದುಕೊಂಡು 58.4 ಓವರ್‌ಗಳಲ್ಲಿ 152 ರನ್‌ಗಳಿಗೆ ಆಲೌಟ್ ಆಯಿತು.
Double-strike and victory sealed 🔒👌
🎥 Kuldeep Yadav wraps up a massive win for #TeamIndia in New Chandigarh ☝️☝️
Scorecard ▶️ https://t.co/Au50EfVM30#INDvAFG | @IDFCFIRSTBank | @imkuldeep18 pic.twitter.com/tNC2HcqQHm
— BCCI (@BCCI) June 8, 2026
ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಬೃಹತ್ ಮೊತ್ತ ಕಲೆಹಾಕಿದ್ದರಿಂದ ಅಫ್ಘಾನಿಸ್ತಾನಕ್ಕೆ ‘ಫಾಲೋ-ಆನ್’ ಹೇರಲಾಯಿತು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲೂ ಅಫ್ಘಾನ್ ಬ್ಯಾಟರ್‌ಗಳಿಗೆ ಭಾರತದ ಸ್ಪಿನ್ ಜೋಡಿ ಸಿಂಹಸ್ವಪ್ನವಾಗಿ ಕಾಡಿತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅಫ್ಘಾನಿಸ್ತಾನ ಕೇವಲ 35.5 ಓವರ್‌ಗಳಲ್ಲಿ 112 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ ಶರಣಾಯಿತು.
ಭಾರತದ ಪರ ಯುವ ಸ್ಪಿನ್ನರ್‌ಗಳಾದ ವಾಷಿಂಗ್ಟನ್ ಸುಂದರ್ ಮತ್ತು ಕುಲದೀಪ್ ಯಾದವ್ ಅಫ್ಘಾನ್ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ವಾಷಿಂಗ್ಟನ್ ಸುಂದರ್ ಭರ್ಜರಿ ಬೌಲಿಂಗ್ ಪ್ರದರ್ಶಿಸಿ 4 ಪ್ರಮುಖ ವಿಕೆಟ್ ಕಿತ್ತರೆ, ಕುಲದೀಪ್ ಯಾದವ್ ನಡೆಸಿ 3 ವಿಕೆಟ್ ಪಡೆದು ಎದುರಾಳಿಗಳನ್ನು ಕಂಗಾಲು ಮಾಡಿದರು.
Clinical from start to finish 👏
An unforgettable Test match in New Chandigarh ends with #TeamIndia securing their biggest ever win by an innings and 300 runs 🤍
Scorecard ▶️ https://t.co/Au50EfVM30#INDvAFG | @IDFCFIRSTBank pic.twitter.com/RfmeJWSyh2
— BCCI (@BCCI) June 8, 2026
ಎರಡನೇ ಇನ್ನಿಂಗ್ಸ್‌ನಲ್ಲಿ ಅಫ್ಘಾನಿಸ್ತಾನ ಪರ ಆರಂಭಿಕ ಆಟಗಾರ ಸೆದಿಕುಲ್ಲಾ ಅಟಲ್ 42 ರನ್ ಮತ್ತು ರಹಮಾನುಲ್ಲಾ ಗುರ್ಬಾಜ್ 24 ರನ್ ಸ್ವಲ್ಪ ಮಟ್ಟದ ಹೋರಾಟ ನಡೆಸಿದರಾದರೂ, ಉಳಿದ ಯಾವ ಬ್ಯಾಟರ್‌ಗಳೂ ಭಾರತದ ಸ್ಪಿನ್ ಜಾಲಕ್ಕೆ ಉತ್ತರ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ.
ಮೊದಲ ಇನ್ನಿಂಗ್ಸ್‌ನಲ್ಲಿ ಬೃಹತ್ ಮೊತ್ತ ಕಲೆಹಾಕಿದ್ದ ಭಾರತ, ಬೌಲಿಂಗ್‌ನಲ್ಲೂ ಸಂಪೂರ್ಣ ಪ್ರಾಬಲ್ಯ ಸಾಧಿಸುವ ಮೂಲಕ ಇನ್ನಿಂಗ್ಸ್ ಹಾಗೂ 300 ರನ್‌ಗಳ ದೊಡ್ಡ ಜಯದೊಂದಿಗೆ ಟೆಸ್ಟ್ ಪಂದ್ಯವನ್ನು ತನ್ನದಾಗಿಸಿಕೊಂಡಿದೆ.
ಸಂಕ್ಷಿಪ್ತ ಸ್ಕೋರ್
ಭಾರತ ಮೊದಲ ಇನ್ನಿಂಗ್ಸ್ 564/8 ಡಿಕ್ಲೇರ್
ಅಫ್ಘಾನಿಸ್ತಾನ ಮೊದಲ ಇನ್ನಿಂಗ್ಸ್ 152/10
ಅಫ್ಘಾನಿಸ್ತಾನ ಎರಡನೇ ಇನ್ನಿಂಗ್ಸ್ 112/10
