ಬೆಂಗಳೂರು: ಖಾತೆ ಬಗ್ಗೆ ನನಗೆ ಯಾವುದೇ ಅಸಮಾಧಾನ ಇಲ್ಲ. ನಾನು ಸಂತೋಷದಿಂದ ಕೆಲಸ ಮಾಡುತ್ತೇನೆ ಎಂದು ಸಚಿವ ಬೈರತಿ ಸುರೇಶ್ (Byrathi Suresh) ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್, ಸಿಎಂ ಡಿಕೆಶಿ, ಸಿದ್ದರಾಮಯ್ಯ ಆಶೀರ್ವಾದ ಮಾಡಿ ನನಗೆ ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಸಮರ್ಥವಾಗಿ ನಿಭಾಯಿಸುವ ಶಕ್ತಿ ದೇವರು ಕೊಡುವ ವಿಶ್ವಾಸ ಇದೆ. ಹಿಂದೆ ನಗರಾಭಿವೃದ್ಧಿ ಇಲಾಖೆಯಲ್ಲಿ ಹೊಸ ಕಾರ್ಯಕ್ರಮ ಮಾಡಿ ಉತ್ತಮವಾಗಿ ಇಲಾಖೆ ನಡೆಸಿದ್ದೆ. ಇದೇ ರೀತಿ ಕೆಲಸ ಸಾರಿಗೆ ಇಲಾಖೆಯಲ್ಲಿ (Transport Department) ಮಾಡುತ್ತೇನೆ. ಹೈಕಮಾಂಡ್, ಕಾಂಗ್ರೆಸ್‌ಗೆ ಒಳ್ಳೆಯ ಹೆಸರು ತರುವ ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ – ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್
ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡೋರು ನಮ್ಮ ಕರ್ನಾಟಕದವರೇ. ಸಾರಿಗೆ ಇಲಾಖೆಯಲ್ಲಿ ರಾಮಲಿಂಗಾ ರೆಡ್ಡಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಇಲಾಖೆ ಸಮಸ್ಯೆ ಪರಿಹಾರ ಮಾಡುವ ಕೆಲಸ ಮಾಡುತ್ತೇನೆ. ಖಾತೆ ಬಗ್ಗೆ ನನಗೇನು ಬೇಸರ ಇಲ್ಲ. ಯಾವುದೇ ಇಲಾಖೆ ಕೊಟ್ಟರೂ ಸಂತೋಷವಾಗಿ ಕೆಲಸ ಮಾಡುತ್ತೇನೆ. ನಮ್ಮ ನಾಯಕರು, ಹೈಕಮಾಂಡ್ ನಾಯಕರು ಎಲ್ಲರೂ ಯೋಚನೆ ಮಾಡಿ ಇಷ್ಟು ದೊಡ್ಡ ಖಾತೆ ಕೊಟ್ಟಿದ್ದಾರೆ. ಸಂತೋಷದಿಂದ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಒಂದೇ ದಿನ 15 ವಿಕೆಟ್ ಪತನ – ಅಫ್ಘಾನ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್, 300 ರನ್‌ಗಳ ಭರ್ಜರಿ ಜಯ
ಜಮೀರ್‌ಗೆ ಮಂತ್ರಿ ಸ್ಥಾನ ಕೊಡುವ ವಿಚಾರವಾಗಿ ಮಾತನಾಡಿ, ಯಾರಿಗೆ ಮಂತ್ರಿ ಮಾಡಬೇಕು ಅಂತ ಹೈಕಮಾಂಡ್, ಸಿಎಂ ತೀರ್ಮಾನ ಮಾಡುತ್ತಾರೆ. ಎಲ್ಲರು ಕೂತು ಯಾರಿಗೆ ಮಂತ್ರಿ ಮಾಡಬೇಕು ಅಂತ ತೀರ್ಮಾನ ಮಾಡುತ್ತಾರೆ. ಶಾಸಕರು, ಮಾಜಿ ಮಂತ್ರಿಗಳು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಯಾರಿಗೆ ಕೊಡಬೇಕು ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ನುಡಿದರು. ಇದನ್ನೂ ಓದಿ: Kottiyoor Row | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ – ಕಣ್ಣೂರು ಡಿಐಜಿ ಸ್ಪಷ್ಟನೆ
ಡಿಸಿಎಂ ಹುದ್ದೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಯಾರಿಗೆ ಯಾವ ಹುದ್ದೆ ಕೊಡಬೇಕು ಅಂತ ಅವರೇ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: KSRTC ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
