ಹಾವೇರಿ: ಮನೆಯ ಮುಂದೆ ನಿಂತಿದ್ದ 2 ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ (Tractor) ಹರಿದು ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ನಡೆದಿದೆ.
ಮೃತ ಮಗುವನ್ನ (Child) ರಬೀಯಾ ದೊಡ್ಡಮನಿ 2 ವರ್ಷ ವಯಸ್ಸು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರಾಯಚೂರು | 9 ವರ್ಷಗಳ ಹಿಂದಿನ ಕೇಸ್ – ದರೋಡೆ, ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

ಮನೆಯ ಮುಂದೆ ನಿಂತಿದ್ದ ಮಗುವಿನ ಮೇಲೆ ಏಕಾಏಕಿ ಟ್ರ್ಯಾಕ್ಟರ್ ಹರಿದು ಸಾವನ್ನಪ್ಪಿದೆ. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇದನ್ನೂ ಓದಿ: ದೇಶದಲ್ಲಿ LPG ಕೊರತೆ ಇಲ್ಲ – 5 ಕೆಜಿ ಗ್ಯಾಸ್ ಸಿಲಿಂಡರ್ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

