ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧದ ಮುಡಾ ಹಗರಣ (MUDA Scam Case) ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದೆ.
ನಮ್ಮ ತನಿಖೆಯಲ್ಲಿ ಸಾಕಷ್ಟು ಮಾಹಿತಿ ಬಹಿರಂಗ ಆಗಿದೆ ಎಂದು ಕೆಳಹಂತದ ನ್ಯಾಯಾಲಯ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಇ.ಡಿ ಅಧಿಕಾರಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ ಕೇಸ್ – ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್
ಮುಡಾದಲ್ಲಿ ಹಗರಣ ನಡೆದಿದೆ. ನಾಲ್ವರು ಆರೋಪಿಗಳ ಪಾತ್ರ ಇರೋದು ತನಿಖೆಯಲ್ಲಿ ಸಾಕ್ಷ್ಯಾಧಾರ ಇದೆ. ಹೀಗಾಗಿ, ಮರು ತನಿಖೆಗೆ ಮನವಿ ಮಾಡಲಾಗಿದೆ. ಸ್ನೇಹಮಯಿ ಕೃಷ್ಣ ಬಳಿಕ ಇ.ಡಿಯಿಂದಲೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆಯಾಗಿದೆ.

