ಟೆಹ್ರಾನ್: ಅಮೆರಿಕ ಹಾಗೂ ಇರಾನ್ ನಡುವೆ 2 ವಾರಗಳ ಕದನ ವಿರಾಮ (Ceasefire) ಘೋಷಣೆ ಬೆನ್ನಲ್ಲೇ ಇರಾನ್ (Iran) ಜನತೆ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ ಮಾಡಿದೆ.
ಕದನ ವಿರಾಮ ಹಿನ್ನೆಲೆ ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ವಿಜಯೋತ್ಸವ (Victory Celebration) ಆಚರಿಸಲಾಗಿದೆ. ಜೀವ್ಸ್ ಹಾಗೂ ಅಮೆರಿಕನ್ನರ ಮೇಲೆ ನಮ್ಮ ಗೆಲುವಾಗಿದೆ ಎಂದು ಘೋಷಣೆ ಕೂಗುತ್ತಾ ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನೂ ಓದಿ: ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್ ಭಾರೀ ಕುಸಿತ
ಇರಾನ್ ರಾಷ್ಟ್ರಧ್ವಜಗಳನ್ನು ಕೈಯಲ್ಲಿ ಹಿಡಿದು ಘೋಷಣೆ ಕೂಗಲಾಗಿದೆ. ಇರಾಕ್‌ನ ಬಾಗ್ದಾದ್‌ನಲ್ಲಿಯೂ ಕೂಡ ಸಂಭ್ರಮಾಚರಣೆ ಜೋರಾಗಿದೆ. ಇದನ್ನೂ ಓದಿ: ಕದನ ವಿರಾಮಕ್ಕೆ ಇರಾನ್ ವಿಧಿಸಿದ 10 ಷರತ್ತುಗಳು ಏನು?
ಮಹತ್ವದ ಬೆಳವಣಿಗೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆಯಾಗಿದೆ. ಇರಾನ್‌ಗೆ ನೀಡಿದ್ದ 48 ಗಂಟೆಗಳ ಡೆಡ್‌ಲೈನ್ ಅಮೆರಿಕ ಕಾಲಮಾನ ರಾತ್ರಿ 8 ಗಂಟೆಗೆ ಅಂತ್ಯವಾಗುವ ಒಂದು ಗಂಟೆಯ ಮೊದಲು ಟ್ರಂಪ್ ತಮ್ಮ ಟ್ರೂಥ್ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ಅಮೆರಿಕ-ಇರಾನ್ ಮಧ್ಯೆ 2 ವಾರಗಳ ಕದನ ವಿರಾಮ ಘೋಷಣೆ
ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಇರಾನ್ ಒಪ್ಪಿಕೊಂಡಿದೆ ಮತ್ತು ಅವರ ಕಡೆಯಿಂದ 10 ಅಂಶಗಳ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದ್ದಾರೆ. ಕದನ ವಿರಾಮವನ್ನು ಇರಾನ್ ಕೂಡ ಒಪ್ಪಿಕೊಂಡಿದೆ. ಇದನ್ನೂ ಓದಿ: ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

