ಹಾಸನ: ಕೆಲ ದಿನಗಳಿಂದ ತೀವ್ರ ಜ್ವರ ಮತ್ತು ಜಾಂಡೀಸ್ (Jaundice) ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ (Student) ಸಾವನ್ನಪ್ಪಿದ ಘಟನೆ ಹಾಸನ (Hassan) ಜಿಲ್ಲೆ ಹೊಳೆನರಸೀಪುರ (Holenarasipura) ತಾಲೂಕಿನ ತಿರುಮಲಾಪುರದಲ್ಲಿ ನಡೆದಿದೆ.
ಪ್ರೀತಿ (20) ಮೃತ ವಿದ್ಯಾರ್ಥಿನಿ. ಕೆಎಸ್‌ಆರ್‌ಟಿಸಿ ಬಸ್ ಚಾಲಕ ಲೋಕೇಶ್.ಟಿ.ಕೆ. ಮತ್ತು ಶೋಭಾ ದಂಪತಿಯ ಹಿರಿಯ ಪುತ್ರಿ ಪ್ರೀತಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ಓದುತ್ತಿದ್ದಳು. ಕೆಲ ದಿನಗಳಿಂದ ತೀವ್ರ ಜ್ವರ ಮತ್ತು ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಳು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ – ನರಸಿಂಹ ಕೊಲೆ ಕೇಸ್ ಆರೋಪಿ ಕಾಲಿಗೆ ಗುಂಡೇಟು
ವಿದ್ಯಾರ್ಥಿನಿ ಅಕಾಲಿಕ ನಿಧನಕ್ಕೆ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಕಣ್ಣೀರಿಟ್ಟಿದ್ದಾರೆ. ಪುತ್ರಿಯನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಇರಾನ್ ಜೊತೆ ಇಂದು ಡೀಲ್.. ಒಪ್ಪಂದ ಆದ ತಕ್ಷಣ ಹಾರ್ಮುಜ್ ಜಲಸಂಧಿ ಓಪನ್: ಟ್ರಂಪ್
