ಬೆಂಗಳೂರು: ಬೆಂಗಳೂರು-ಮುಂಬೈ (Bengaluru-Mumbai) ವಂದೇ ಭಾರತ್ ಸ್ಲೀಪರ್ ರೈಲಿಗೆ (Vande Bharat Sleeper Train) ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಸಂಬಂಧ ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.
ವಂದೇ ಭಾರತ್ ಸ್ಲೀಪರ್ ರೈಲಿಗೆ ಸಂಸದ ಪಿ.ಸಿ.ಮೋಹನ್ ಬೇಡಿಕೆ ಇಟ್ಟಿದ್ದರು. ಸಂಸದರಿಗೆ ಪತ್ರ ಬರೆದು ಹೊಸ ಟ್ರೈನ್‌ಗೆ ಅನುಮತಿ ಸಿಕ್ಕ ಬಗ್ಗೆ ಅಶ್ವಿನಿ ವೈಷ್ಣವ್ ಮಾಹಿತಿ ಕೊಟ್ಟಿದ್ದಾರೆ. ಇದನ್ನೂ ಓದಿ: ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾರಣ
ಡಿಸೆಂಬರ್ 2 ರಂದು ನೈಋತ್ಯ ರೈಲ್ವೆಯ (SWR) ಸ್ಥಾಯಿ ಸಮಿತಿಯ ಅಧ್ಯಯನ ಭೇಟಿಯ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಈ ವಿಷಯವನ್ನು ಪ್ರಸ್ತಾಪಿಸಿದ್ದರು. SMVT ಬೆಂಗಳೂರು ಮೂಲ/ಅಂತ್ಯ ನಿಲ್ದಾಣವಾಗಿ ವಂದೇ ಭಾರತ್ ಸ್ಲೀಪರ್ ರೈಲಿಗೆ ಅವರು ಒತ್ತಾಯಿಸಿದ್ದರು.
ಈಗ ಇರುವ ರೈಲುಗಳು 24-30 ಗಂಟೆಗಳನ್ನು ತೆಗೆದುಕೊಳ್ಳುತ್ತವೆ. ಆದರೆ, ಬಸ್‌ಗಳು 16-18 ಗಂಟೆಗಳನ್ನು ತೆಗೆದುಕೊಳ್ಳುತ್ತವೆ. ನಮಗೆ ಬಸ್‌ನಷ್ಟು ವೇಗದ ರೈಲು ಬೇಕು ಎಂದು ತಿಳಿಸಿದ್ದರು. ಇದನ್ನೂ ಓದಿ: 10 ದಿನ ಚಂದ್ರನ ಸುತ್ತಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್ 2 ಗಗನಯಾತ್ರಿಗಳು

