ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಸುಕ್ಷೇತ್ರ ನಾಲ್ವಾರ ಗ್ರಾಮದ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ (Kori Siddeshwara Mutt Nalwar) ಭೇಟಿ ನೀಡಿ, ಡಾ. ಸಿದ್ದ ತೋಟೇಂದ್ರ ಶಿವಾಚಾರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ದಾಖಲೆ ಮಟ್ಟದಲ್ಲಿ ಅತಿ ಹೆಚ್ಚು ಬಾರಿ ರಾಜ್ಯ ಬಜೆಟ್ ಮಂಡನೆ ಮಾಡಿದ ಸಾಧನೆಗಾಗಿ, ಮಠದ ವತಿಯಿಂದ ಮುಖ್ಯಮಂತ್ರಿಗಳಿಗೆ ವಿಶೇಷ ಗೌರವ ಸಮರ್ಪಿಸಲಾಯಿತು. ಶ್ರೀ ಕೋರಿಸಿದ್ದೇಶ್ವರ ಮಠದ ಶ್ರೀಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಚಿನ್ನದ ಉಂಗುರ ತೊಡಿಸಿ, ಶಾಲು ಹೊದಿಸಿ ಆತ್ಮೀಯವಾಗಿ ಸತ್ಕರಿಸಿದರು. ಇದನ್ನೂ ಓದಿ: ಶ್ರೀರಂಗಪಟ್ಟಣ ತಾಲೂಕಿನ ಗ್ರಾಪಂನಲ್ಲಿ 2 ಕೋಟಿಗೂ ಅಧಿಕ ಅಕ್ರಮ
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಪ್ರಮುಖ ನಾಯಕರು ಮತ್ತು ಜನಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು. ಮಠಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಕೆಲಕಾಲ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡು, ಮಠದ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಇರಾನ್‌ಗೆ ಸುಂಕ ಪಾವತಿಸುವ ಯಾವುದೇ ಹಡಗುಗಳನ್ನ ಬಿಡಲ್ಲ – ವಿಶ್ವಕ್ಕೆ ಟ್ರಂಪ್ ವಾರ್ನಿಂಗ್

