ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ (SSLC Exam) 525 ಅಂಕ ನೀಡುವ ನಿಯಮ ಬದಲಾವಣೆ ಮಾಡಿರುವ ವಿಚಾರದಲ್ಲಿ ಶಿಕ್ಷಣ ಇಲಾಖೆ (Education Department) ಕರಡು ಅಧಿಸೂಚನೆ ಹೊರಡಿಸಿದೆ. ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 7 ದಿನ ಅವಕಾಶ ನೀಡಲಾಗಿದ್ದು ಆಕ್ಷೇಪಣೆ ಸಲ್ಲಿಸಬಹುದಾಗಿದೆ.
ಅಧಿಸೂಚನೆಯಲ್ಲಿ 525 ಅಂಕಗಳ ಅನುಷ್ಠಾನ ಹೇಗೆ ನಡೆಯಲಿದೆ ಎಂಬುದನ್ನು ತಿಳಿಸಲಾಗಿದೆ. ಅದರಂತೆ ತೃತೀಯ ಭಾಷೆ ವಿಷಯದಲ್ಲಿ ಅಂಕಗಳ ಬದಲಾಗಿ ಗ್ರೇಡ್ ಸಿಸ್ಟಮ್ ವಿವರಿಸಲಾಗಿದೆ. ಇದನ್ನೂ ಓದಿ: ಪಿಯುಸಿ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ: ಕೆಇಎ
ತೃತೀಯ ಭಾಷೆಯ ಪರೀಕ್ಷೆಯಲ್ಲಿ ಅಂಕಗಳ ಬದಲಾಗಿ ಗ್ರೇಡ್ ನೀಡಲಾಗುತ್ತದೆ. 80-100 ರಷ್ಟು ಅಂಕ ಗಳಿಸಿದರೆ A ಗ್ರೇಡ್, 50-79 ರಷ್ಟು ಅಂಕ ಗಳಿಸಿದ್ರೆ B ಗ್ರೇಡ್ 49 ರಷ್ಟು ಅಂಕ ಗಳಿಸಿದ್ರೆ C ಗ್ರೇಡ್ ಅಂತ ಕೊಡಲಾಗುತ್ತದೆ. ಹೊಸ ನಿಯಮ 2025-26ನೇ ಸಾಲಿನಿಂದಲೇ ಜಾರಿಗೆ ಬರಲಿದೆ.

