ಬೆಂಗಳೂರು: ಅಖಂಡ ಶ್ರೀನಿವಾಸ ಮೂರ್ತಿ (Akhanda Srinivas Murthy) ತಮ್ಮ ಬೆಂಬಲಿಗರೊಂದಿಗೆ ಭಾನುವಾರ ಜೆಡಿಎಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಸಮ್ಮುಖದಲ್ಲಿ ಪಕ್ಷ ಸೇರಲಿದ್ದಾರೆ. ಇತ್ತೀಚೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಅಖಂಡ ಮನೆಗೆ ತೆರಳಿ ಮಾತುಕತೆ ನಡೆಸಿ ಪಕ್ಷಕ್ಕೆ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ.
ಸಗಾಯಪುರಂ ಪುಟ್ಬಾಲ್ ಕ್ರೀಡಾಂಗಣದಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಸಮಾವೇಶದಲ್ಲಿ ಅಧಿಕೃತವಾಗಿ ಪಕ್ಷ ಸೇರಲಿದ್ದಾರೆ.
