– 15 ಮಂದಿಗೆ ತೀವ್ರ ಗಾಯ
ರಾಯ್ಪುರ: ಛತ್ತೀಸ್‌ಗಢದ (Chhattisgarh) ಶಕ್ತಿ ಜಿಲ್ಲೆಯ ವೇದಾಂತ ವಿದ್ಯುತ್ ಸ್ಥಾವರದಲ್ಲಿ (Vedanta Power Plant) ಮಂಗಳವಾರ ಮಧ್ಯಾಹ್ನ ಬಾಯ್ಲರ್ ಸ್ಫೋಟಗೊಂಡ (Boiler Blast) ಪರಿಣಾಮ 9 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, 15 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ದಾಬ್ರಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಅವಘಡ ಸಂಭವಿಸಿದೆ. ಪೊಲೀಸ್ ವರಿಷ್ಠಾಧಿಕಾರಿ ಪ್ರಫುಲ್ ಠಾಕೂರ್ ಕಾರ್ಮಿಕರ ಸಾವನ್ನು ದೃಢಪಡಿಸಿದ್ದಾರೆ. ಗಾಯಗೊಂಡ ಕಾರ್ಮಿಕರಲ್ಲಿ ಅನೇಕರಿಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿದೆ. ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಪ್ರತಿ ಲೀಟರ್ ಪೆಟ್ರೋಲ್‌ಗೆ 18 ರೂ., ಡೀಸೆಲ್‌ಗೆ 35 ರೂ. ನಷ್ಟ – ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಭಾರೀ ಲಾಸ್
ಸಿಂಘಿತಾರಿ ಗ್ರಾಮದಲ್ಲಿರುವ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಎಂದಿನಂತೆ ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾಗ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಾಯ್ಲರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಬಾಯ್ಲರ್ ಒಳಗೆ ಟ್ಯೂಬ್ ಛಿದ್ರಗೊಂಡಿದ್ದರಿಂದ ಸ್ಫೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಮಹಿಳೆಯರಿಗೆ ಮಾಸಿಕ 2,000 ರೂ., ವರ್ಷಕ್ಕೆ 3 ಸಿಲಿಂಡರ್ ಉಚಿತ – ತಮಿಳುನಾಡಲ್ಲಿ ಬಿಜೆಪಿ ಗ್ಯಾರಂಟಿ
Chhattisgarh: Nine people died and 15 injured in a boiler blast at Vedanta Power Plant in Singhi Tarai area of Sakti district. pic.twitter.com/99FpvMmJDo
— Raajeev Chopra (@Raajeev_Chopra) April 14, 2026
ಘಟನೆಯ ಕುರಿತು ಮಾಹಿತಿ ದೊರೆತ ತಕ್ಷಣ ಪೊಲೀಸರು, ಅಗ್ನಿಶಾಮಕ ದಳದ ತಂಡಗಳು ಮತ್ತು ಹಿರಿಯ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಸ್ಫೋಟದ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾರು, ಟಿಪ್ಪರ್ ನಡುವೆ ಡಿಕ್ಕಿ – ಕೇರಳ ಮೂಲದ ಇಬ್ಬರು ಸಾವು

