Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಸ್ರೇಲ್, ಲೆಬನಾನ್ ನಡುವೆ ಅಮೆರಿಕ ಮಧ್ಯಸ್ಥಿಕೆ – 10 ದಿನಗಳ ಕದನ ವಿರಾಮ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಸ್ರೇಲ್, ಲೆಬನಾನ್ ನಡುವೆ ಅಮೆರಿಕ ಮಧ್ಯಸ್ಥಿಕೆ – 10 ದಿನಗಳ ಕದನ ವಿರಾಮ ಘೋಷಣೆ

Latest

ಇಸ್ರೇಲ್, ಲೆಬನಾನ್ ನಡುವೆ ಅಮೆರಿಕ ಮಧ್ಯಸ್ಥಿಕೆ – 10 ದಿನಗಳ ಕದನ ವಿರಾಮ ಘೋಷಣೆ

Public TV
Last updated: April 17, 2026 8:20 am
Public TV
Share
3 Min Read
Israel Strikes Lebanon With 100 Missiles In 10 Minutes
SHARE

ಬೈರುತ್: ಇರಾನ್ (Iran) ಮತ್ತು ಅಮೆರಿಕದ (America) ನಡುವೆ ತೀವ್ರ ಸಂಘರ್ಷಕ್ಕೆ ಕಾರಣವಾಗಿದ್ದ ಇಸ್ರೇಲ್ ಮತ್ತು ಲೆಬನಾನ್ ಯುದ್ಧವನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಯಲ್ಲಿ 10 ದಿನಗಳ ಕದನ ವಿರಾಮಕ್ಕೆ ಸಹಮತ ವ್ಯಕ್ತವಾಗಿದೆ. ಈ ನಡುವೆ ವಿಚಾರದಲ್ಲಿ ಟ್ರಂಪ್ (Donald Trump) ಮತ್ತೆ ಬಡಾಯಿ ಕೊಚ್ಚಿಕೊಂಡರೆ ಮತ್ತೊಂದು ಕಡೆ ಇರಾನ್ ಮೇಲೆ ಮಿಲಿಟರಿ ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಲೆಬನಾನ್ ಮತ್ತು ಇಸ್ರೇಲ್ ನಡುವಿನ ತೀವ್ರ ಸಂಘರ್ಷಕ್ಕೆ ಬ್ರೇಕ್ ಬಿದ್ದಿದೆ. ಅಮೆರಿಕದ ಸಮ್ಮುಖದಲ್ಲಿ ನಡೆದ ಮಾತುಕತೆಯಲ್ಲಿ ಎರಡು ದೇಶಗಳು ಹತ್ತು ದಿನಗಳ ಕದನ ವಿರಾಮಕ್ಕೆ ಸಮ್ಮತಿ ಸೂಚಿಸಿವೆ. ಈ ಮಾಹಿತಿಯನ್ನು ಖಚಿತಪಡಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉದ್ವಿಗ್ನತೆಗೆ ತಾತ್ಕಾಲಿಕ ಶಮನವಾಗಿ 10 ದಿನಗಳ ಕದನ ವಿರಾಮ ಜಾರಿಗೆ ಬರಲಿದೆ ಎಂದು ಘೋಷಿಸಿದ್ದಾರೆ.

ಟ್ರೂತ್ ಸೋಷಿಯಲ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಟ್ರಂಪ್, ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ನಡೆದ ಮಾತುಕತೆ ಫಲಪ್ರದವಾಗಿದೆ. ಕದನ ವಿರಾಮ ಒಪ್ಪಂದಕ್ಕೆ ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ. ಲೆಬನಾನ್ ಸ್ಥಳೀಯ ಕಾಲಮಾನ ರಾತ್ರಿ 12 ಗಂಟೆಯ ನಂತರ 10 ದಿನಗಳ ಕಾಲ ಕದನ ವಿರಾಮ ಜಾರಿಯಾಗಲಿದೆ. ಮಂಗಳವಾರ, 34 ವರ್ಷಗಳ ಬಳಿಕ ಮೊದಲ ಬಾರಿಗೆ ಲೆಬನಾನ್ ಮತ್ತು ಇಸ್ರೇಲ್ ಪ್ರತಿನಿಧಿಗಳು ವಾಷಿಂಗ್ಟನ್ ಡಿ.ಸಿ.ಯಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ಚರ್ಚೆ ನಡೆಸಿದ ಹಿನ್ನೆಲೆ ಈ ಬೆಳವಣಿಗೆ ನಡೆದಿದೆ. ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹಾಗೂ ವಿದೇಶಾಂಗ ಕಾರ್ಯದರ್ಶಿ ರುಬಿಯೊ ಅವರೊಂದಿಗೆ ಶಾಶ್ವತ ಕದನ ವಿರಾಮಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಾ ಟ್ರಂಪ್ ಮತ್ತೆ ಬಡಾಯಿ ಕೊಚ್ಚಿಕೊಂಡಿದ್ದಾರೆ. ವಿಶ್ವದ ವಿವಿಧ ಭಾಗಗಳಲ್ಲಿ ಒಂಭತ್ತು ಯುದ್ಧಗಳನ್ನು ನಿಲ್ಲಿಸುವಲ್ಲಿ ಭಾಗಿಯಾಗಿರುವುದು ಗೌರವದ ಸಂಗತಿ. ಇದು ನನ್ನ 10ನೇ ಪ್ರಯತ್ನವಾಗಿದ್ದು, ಇದನ್ನೂ ಅಂತ್ಯಗೊಳಿಸಲು ಬದ್ಧನಾಗಿದ್ದೇನೆ ಎಂದು ಟ್ರಂಪ್ ಅವರು ಹೇಳಿದ್ದಾರೆ. ಈ ಮೂಲಕ ಇಸ್ರೇಲ್ ಲೆಬನಾನ್ ಯುದ್ಧವನ್ನು ಅಂತ್ಯಗೊಳಿಸುವ ಭರವಸೆ ನೀಡಿದ್ದಾರೆ. ಒಂದು ಕಡೆ ಕದನ ವಿರಾಮದ ಮೂಲಕ ಶಾಂತಿ ಮಂತ್ರ ಪಠಿಸುವ ಟ್ರಂಪ್ ಮತ್ತೊಂದು ಕಡೆ ಇರಾನ್ ಮೇಲೆ ದಾಳಿ ಮಾಡುವ ಎಚ್ಚರಿಕೆ ಟ್ರಂಪ್ ನೀಡಿದ್ದಾರೆ. ಇರಾನ್ ಜೊತೆಗಿನ ಯುದ್ಧದ ಬಗ್ಗೆ ಮಾತನಾಡಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್, ಅಮೆರಿಕದ ಸೇನೆಯು ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಅಗತ್ಯವಿದ್ದರೆ ತಕ್ಷಣವೇ ಯುದ್ಧದಂತಹ ಕಾರ್ಯಾಚರಣೆಗಳನ್ನು ಪುನರಾರಂಭಿಸಬಹುದು ಎಂದು ಹೇಳಿದ್ದಾರೆ.

ಅಮೆರಿಕ ಪ್ರಸ್ತುತ ರಾಜತಾಂತ್ರಿಕ ಪರಿಹಾರಕ್ಕೆ ಆದ್ಯತೆ ನೀಡುತ್ತಿದೆ, ಆದರೆ ಇರಾನ್ ಒಪ್ಪಂದಕ್ಕೆ ಒಪ್ಪದಿದ್ದರೆ ಪರಿಸ್ಥಿತಿ ವೇಗವಾಗಿ ಬದಲಾಗಬಹುದು ಎಂದು ಸ್ಪಷ್ಟಪಡಿಸಿದರು. ಹೆಗ್ಸೆತ್ ಪ್ರಕಾರ, ಈ ಪ್ರದೇಶದಲ್ಲಿ ನಿರಂತರ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಅಮೆರಿಕದ ಪಡೆಗಳು ಹೆಚ್ಚಿನ ಎಚ್ಚರಿಕೆ ವಹಿಸಿವೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿವೆ. ಅಮೆರಿಕಾದಿಂದ ಎಚ್ಚರಿಕೆಗಳನ್ನು ಪಡೆದ ನಂತರ ಹಲವಾರು ಹಡಗುಗಳು ಮಾರ್ಗವನ್ನು ಬದಲಾಯಿಸಿವೆ. ಆದರೆ ಯಾವುದೇ ಹಡಗುಗಳನ್ನು ಬಲವಂತವಾಗಿ ನಿಲ್ಲಿಸಲಾಗಿಲ್ಲ. ಯಾವುದೇ ಸಮಯದಲ್ಲಿ ಕ್ರಮ ತೆಗೆದುಕೊಳ್ಳಲು ತಮ್ಮ ಪಡೆಗಳು ಸಿದ್ಧವಾಗಿವೆ ಎಂದು ಅಮೆರಿಕದ ಮಿಲಿಟರಿ ಅಧಿಕಾರಿಗಳು ಹೇಳಿದ್ದಾರೆ.

ಇರಾನಿನ ಬಂದರುಗಳ ದಿಗ್ಬಂಧನದ ಮಧ್ಯೆ 72 ಗಂಟೆಗಳಲ್ಲಿ 14 ಹಡಗುಗಳು ಮಾರ್ಗವನ್ನು ಬದಲಾಯಿಸಿವೆ. ಅಮೆರಿಕದ ಮಿಲಿಟರಿಯ ಪ್ರಕಾರ, ಇರಾನಿನ ಬಂದರುಗಳ ಮೇಲಿನ ದಿಗ್ಬಂಧನದ ಪರಿಣಾಮವು ಈಗ ಸಮುದ್ರ ಸಂಚಾರದ ಮೇಲೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸೋಮವಾರ ದಿಗ್ಬಂಧನ ಪ್ರಾರಂಭವಾದಾಗಿನಿಂದ 13 ಹಡಗುಗಳು ತಮ್ಮ ಮಾರ್ಗಗಳಿಂದ ಹಿಂತಿರುಗಿವೆ ಎಂದು ಜಂಟಿ ಮುಖ್ಯಸ್ಥರ ಅಧ್ಯಕ್ಷ ಜನರಲ್ ಡಾನ್ ಕೈನೆ ವರದಿ ಮಾಡಿದ್ದಾರೆ.

ಇನ್ನು ಮಧ್ಯಪ್ರಾಚ್ಯದಲ್ಕಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಫ್ರಾನ್ಸ್ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್ ಚರ್ಚೆ ನಡೆಸಿದ್ದಾರೆ. ನಿನ್ನೆ ರಾತ್ರಿ ದೂರವಾಣಿ ಮೂಲಕ ಉಭಯ ನಾಯಕರು ಮಾತನಾಡಿದ್ದಾರೆ. ಸಂಘರ್ಷದ ಮಧ್ಯೆ ಹೊರ್ಮುಜ್ ಜಲಸಂಧಿಯಲ್ಲಿ ಸುರಕ್ಷತೆ ಮತ್ತು ಸಂಚರಣೆಯ ಸ್ವಾತಂತ್ರ‍್ಯವನ್ನು ಪುನಃಸ್ಥಾಪಿಸುವ ತುರ್ತು ಅಗತ್ಯದ ಬಗ್ಗೆ ಚರ್ಚಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಪ್ರಧಾನಿ ಮೋದಿ, ಹೆಚ್ಚುತ್ತಿರುವ ಉದ್ವಿಗ್ನತೆಗಳ ನಡುವೆಯೂ ಈ ಪ್ರದೇಶದಲ್ಲಿ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳುವ ಮತ್ತು ಸುರಕ್ಷಿತ ಸಮುದ್ರ ಮಾರ್ಗಗಳನ್ನು ಕಾಯ್ದುಕೊಳ್ಳುವ ಬಗ್ಗೆ ಚರ್ಚಿಸಿದೆ ಎಂದರು. ಸದ್ಯ ಇಸ್ರೇಲ್ ಮತ್ತು ಲೆಬನಾನ್ ನಡುವೆ ಕದನ ವಿರಾಮ ಘೋಷಣೆಯಾಗಿರುವ ಹಿನ್ನಲೆ ಇರಾನ್ ಮತ್ತು ಅಮೆರಿಕಾದ ನಡುವೆ ಎರಡನೇ ಹಂತದ ಮಾತುಕತೆಗೆ ಮತ್ತೊಂದು ವೇದಿಕೆ ಸಿದ್ಧವಾಗಿದೆ. ಶೀಘ್ರದಲ್ಲಿ ಕದನ ವಿರಾಮದ ಎರಡನೇ ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆಗಳಿವೆ.

TAGGED:americaCease FireiranIsraelLebanonMiddle East Warಅಮೆರಿಕಇರಾನ್ಇಸ್ರೇಲ್ಕದನ ವಿರಾಮಬೈರುತ್ಮಧ್ಯಪ್ರಾಚ್ಯಲೆಬನಾನ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Tumakuru Narcotic Pill Sale 6 Arrested
Crime

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್

Public TV
By Public TV
33 minutes ago
Noida Workers Protest Arrest
Latest

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

Public TV
By Public TV
36 minutes ago
Vinay Kulkarni 2
Crime

ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ ಮಾಡಿ ಕುಲಕರ್ಣಿ-ಮುತ್ತಗಿ ಮಾತುಕತೆ

Public TV
By Public TV
56 minutes ago
Manipal County Road Man Suspect Death
Bengaluru City

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
1 hour ago
Bengaluru Yelahanka Businessman Arrested for Blackmailing And Raping Female Customs Officer
Bengaluru City

ಪ್ರೀತಿ, ಮದುವೆ ಹೆಸರಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ – 50 ಜನರಿಗೆ ಕೃಪಾಲನಿ ಬ್ಲ್ಯಾಕ್‌ಮೇಲ್

Public TV
By Public TV
2 hours ago
Crime 2
Crime

ಕೀವ್‌ನ ಸೂಪರ್‌ಮಾರ್ಕೆಟ್‌ನಲ್ಲಿ ಬಂದೂಕುಧಾರಿಯಿಂದ ಗುಂಡಿನ ದಾಳಿ – 6 ಮಂದಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?