ಮಂಡ್ಯ: ಕೆರೆಯಲ್ಲಿ ಮೀನು (Fishing) ಹಿಡಿಯಲು ಹೋದ ಯುವಕನೋರ್ವ (Youth) ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಕೆಆರ್ ಪೇಟೆ (KR Pete) ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅರುಣ್‌ಕುಮಾರ್ (26) ಮೃತ ದುರ್ದೈವಿ. ಅರುಣ್ ಗ್ರಾಮದ ಬಳಿ ಇರುವ ಲಿಂಗಾಪುರ ಕೆರೆಯಲ್ಲಿ ತಂದೆಯ ಜೊತೆಗೆ ಮೀನು ಹಿಡಿಯಲು ಹೋಗಿದ್ದ ವೇಳೆ ಕೆರೆಯ ಕೆಸರು ಗುಂಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾನೆ. ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನುರಿತ ಈಜುಗಾರರ ಸಹಕಾರದಿಂದ ಕೆರೆಯ ಹೂಳಿನಲ್ಲಿ ಸಿಲುಕಿದ್ದ ಅರಣ್‌ಕುಮಾರ್‌ನ ಶವವನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ
ನಂತರ ಶವವನ್ನು ವಶಕ್ಕೆ ಪಡೆದ ಪೊಲೀಸರು ಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ, ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ನೀಡಲಾಯಿತು. ಅರುಣ್‌ಕುಮಾರ್‌ನ ತಂದೆ ಸಹ ಮೀನು ಹಿಡಿಯಲು ಹೋಗಿದ್ದು, ಅವರಿಗೆ ಯಾವುದೇ ತೊಂದರೆಯಾಗಿಲ್ಲ. ಕಣ್ಣ ಮುಂದೆಯೇ ಮಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದನ್ನು ಕಂಡು ಬಿಕ್ಕಳಿಸಿ ಅತ್ತಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಕಿಕ್ಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

