– ಲೋಕಸಭೆಯಲ್ಲಿ ಮಹಿಳಾ ಮೀಸಲಿಗೆ ಸೋಲು; ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ವಾಗ್ದಾಳಿ
ಬೆಂಗಳೂರು: ಲೋಕಸಭೆಯಲ್ಲಿ ಮಹಿಳಾ ಮೀಸಲಿಗೆ (Women’s Reservation Bill) ಸೋಲುಂಟಾಗಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಕಿಡಿಕಾರಿದ್ದಾರೆ. ಕಾಂಗ್ರೆಸ್‌ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಹೆಚ್‌ಡಿಕೆ, 1996 ಮತ್ತು 2026; ಕರಾಳ ಇತಿಹಾಸ ಮರುಕಳಿಸಿದೆ! ಮೂರು ದಶಕಗಳ ನಂತರವೂ ಕಾಂಗ್ರೆಸ್ (Congress) ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ
1996 ಮತ್ತು 2026; ಕರಾಳ ಇತಿಹಾಸ ಮರುಕಳಿಸಿದೆ! ಮೂರು ದಶಕಗಳ ನಂತರವೂ @INCIndia ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು.
ಅಂದು: ಶ್ರೀ @H_D_Devegowda ಅವರ ನೇತೃತ್ವದ ಸಂಯುಕ್ತ ರಂಗ ಸರಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ಕ್ರಾಂತಿಕಾರಿ…
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 18, 2026
ಅಂದು: ಹೆಚ್.ಡಿ.ದೇವೇಗೌಡ ಅವರ ನೇತೃತ್ವದ ಸಂಯುಕ್ತ ರಂಗ ಸರ್ಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡು ಸಂಸತ್ತಿನಲ್ಲಿ ಮಸೂದೆ ಮಂಡಿಸಿತ್ತು. ಅಂದು ಇದೇ ಕಾಂಗ್ರೆಸ್ ಮತ್ತು ಅದರ ಸಹಚರ ಶಕ್ತಿಗಳು ಆ ಪ್ರಯತ್ನವನ್ನು ಸಂಘಟಿತವಾಗಿ ವಿಫಲಗೊಳಿಸಿದ್ದವು. ಇಂದು: ಆವತ್ತು ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ದಿಟ್ಟಹೆಜ್ಜೆ ಇರಿಸಿದ್ದರು. ಪುನಾ ಅದೇ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಸೇರಿ ಸನ್ಮಾನ್ಯ ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಕೆಂಡಕಾರಿದ್ದಾರೆ.
ರಾಷ್ಟ್ರದ ನಾರಿಶಕ್ತಿಗೆ ನನ್ನ ಮನವಿ ಇಷ್ಟೇ, ನಿರಾಶೆ ಬೇಕಿಲ್ಲ. ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದೊಂದು ದಿನ ನಿಮಗೆ ಅಗ್ರಮನ್ನಣೆ ಸಿಕ್ಕೇ ಸಿಗುತ್ತದೆ. 33% ಮಹಿಳಾ ಮೀಸಲು ಗುರಿ ಸಾಧಿಸುವುದು ಶತಸಿದ್ಧ ಎಂದು ಹೆಚ್‌ಡಿಕೆ ಪ್ರತಿಜ್ಞೆ ಮಾಡಿದ್ದಾರೆ. ಇದನ್ನೂ ಓದಿ: ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ



