Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 20 ಸಾವು, ಹಲವರ ಸ್ಥಿತಿ ಚಿಂತಾಜನಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 20 ಸಾವು, ಹಲವರ ಸ್ಥಿತಿ ಚಿಂತಾಜನಕ

Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 20 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
Last updated: April 19, 2026 6:03 pm
Public TV
Share
2 Min Read
Tamil Nadu factory blast 20 killed several injured as massive blast rips through firecracker factory in Virudhunagar
SHARE

ಚೆನ್ನೈ: ತಮಿಳುನಾಡಿನ (Tamil Nadu) ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ (Firecracker Factory) ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 20 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ ಮಧ್ಯಾಹ್ನ ವಿರುಧುನಗರ(Virudhunagar) ಜಿಲ್ಲೆಯ ಕಟ್ಟನಾರ್‌ಪಟ್ಟಿ ಗ್ರಾಮದ ಬಳಿಯಿರುವ ವನಜ ಪಟಾಕಿ ತಯಾರಿಕಾ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಕಟ್ಟಡವು ಸಂಪೂರ್ಣವಾಗಿ ನೆಲಸಮವಾಗಿದೆ.

ಗಾಯಾಳುಗಳನ್ನು ವಿರುಧುನಗರ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಮಧುರೈ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

#WATCH | Tamil Nadu: A massive explosion occurred at a firecracker factory in Kattanarpatti near Virudhunagar. 16 people died and 6 were injured; visuals from the spot

(Video source: Fire and Rescue Department) https://t.co/Ue6GyKMYBy pic.twitter.com/tGPYxZf1Yw

— ANI (@ANI) April 19, 2026

ಪ್ರಾಥಮಿಕ ತನಿಖೆಯ ಪ್ರಕಾರ, ಪಟಾಕಿ ತಯಾರಿಕೆಗೆ ಬೇಕಾದ ರಾಸಾಯನಿಕಗಳನ್ನು ಮಿಶ್ರಣ ಮಾಡುವಾಗ ಸಂಭವಿಸಿದ ಘರ್ಷಣೆಯಿಂದ ಈ ಭೀಕರ ಸ್ಫೋಟ ಸಂಭವಿಸರಬಹುದು ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

ಸ್ಫೋಟದ ತೀವ್ರತೆ ಎಷ್ಟಿತ್ತು ಎಂದರೆ ಸುಮಾರು 5 ಕಿಲೋಮೀಟರ್ ದೂರದವರೆಗೂ ಶಬ್ಧ ಕೇಳಿಸಿದೆ. ಕಾರ್ಖಾನೆಯ ನಾಲ್ಕು ಮಹಡಿ ಸಂಪೂರ್ಣವಾಗಿ ಕುಸಿದಿದೆ.

ಈ ಘಟಕ ಸುಮಾರು 150 ಕಾರ್ಮಿಕರನ್ನು ಹೊಂದಿತ್ತು. ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಸಾಮಾನ್ಯವಾಗಿ ಭಾನುವಾರ ಈ ಕಾರ್ಖಾನೆಗೆ ರಜೆ ನೀಡಲಾಗುತ್ತಿತ್ತು. ಆದರೆ ವಿಧಾನಸಭಾ ಚುನಾವಣೆಗಾಗಿ ಏಪ್ರಿಲ್ 23 ರಂದು ರಜೆ ನೀಡಬೇಕಾಗಿರುವುದರಿಂದ ಇಂದು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಎಷ್ಟು ಸಂಖ್ಯೆಯ ಕಾರ್ಮಿಕರು ಇಂದು ಕೆಲಸಕ್ಕೆ ಹಾಜರಾಗಿದ್ದರು ಎನ್ನುವುದು ತಿಳಿದು ಬಂದಿಲ್ಲ.

Tamil Nadu CM MK Stalin tweets, “…My deepest condolences to the families of those who lost their lives. I have requested the Ministers K.K.S.S.R. Ramachandran and Thangam Thennarasu to rush to the scene immediately to expedite and monitor the rescue operations…” pic.twitter.com/cp4ABPgCL0

— ANI (@ANI) April 19, 2026

ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸಲು ಸಚಿವರಾದ ಕೆ.ಕೆ.ಎಸ್.ಎಸ್.ಆರ್. ರಾಮಚಂದ್ರನ್ ಮತ್ತು ತಂಗಂ ತೆನ್ನರಸು ಅವರನ್ನು ಸ್ಥಳಕ್ಕೆ ಕಳುಹಿಸಿದ್ದಾರೆ.

ನಿರ್ಲಕ್ಷ್ಯ ಮತ್ತು ಸುರಕ್ಷತಾ ನಿಯಮಗಳ ಉಲ್ಲಂಘನೆಗಾಗಿ ಕಾರ್ಖಾನೆಯ ಮಾಲೀಕರು ಮತ್ತು ವ್ಯವಸ್ಥಾಪಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದ ಕೂಡಲೇ ಮಾಲೀಕರು ತಲೆಮರೆಸಿಕೊಂಡಿದ್ದು, ಪೊಲೀಸರು ಈಗ ಶೋಧ ನಡೆಸುತ್ತಿದ್ದಾರೆ.

TAGGED:firecrackerStalintamil naduVirudhunagarತಮಿಳುನಾಡುಪಟಾಕಿ ದುರಂತವಿರುಧುನಗರಸ್ಟಾಲಿನ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
11 minutes ago
Mallikarjun Kharge 2
Bengaluru City

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ, ಮೋದಿಯ ಸುಳ್ಳು ಆರೋಪ ಖಂಡಿಸುತ್ತೇನೆ: ಖರ್ಗೆ ಕೆಂಡಾಮಂಡಲ

Public TV
By Public TV
55 minutes ago
Tejasvi Surya
Bengaluru City

ನಾರಿಶಕ್ತಿಗೆ ವಿಪಕ್ಷಗಳ ವಿರೋಧ – ಇದರ ಪರಿಣಾಮ ಪ.ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ: ತೇಜಸ್ವಿ ಸೂರ್ಯ ಭವಿಷ್ಯ

Public TV
By Public TV
59 minutes ago
Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
1 hour ago
a man from Belthangady who was going to sabarimala temple fell from the train and died in kerala
Dakshina Kannada

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

Public TV
By Public TV
2 hours ago
Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?