ಬೆಳಗಾವಿ: ವರದಕ್ಷಿಣೆ (Dowry) ಕಿರುಕುಳಕ್ಕೆ ಬೇಸತ್ತು ಗೃಹಿಣಿ (Housewife) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ (Belagavi)ಜ್ಯೋತಿ ನಗರದಲ್ಲಿ (Jyoti Nagar) ನಡೆದಿದೆ.
ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಗಂಡ, ಹೆಂಡತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ಮನೆಯ ಮೊದಲ ಮಹಡಿಯಲ್ಲಿ ಕಿಟಿಕಿ ಗ್ರಿಲ್‌ಗೆ ವೇಲ್ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ಮಹಿಳಾ ಮೀಸಲಾತಿ ಸೋಲು ದ್ರೌಪದಿ ವಸ್ತ್ರಾಪಹರಣಕ್ಕೆ ಸಮ: ಯೋಗಿ ಆದಿತ್ಯನಾಥ್
ತವರು ಮನೆಯವರೊಂದಿಗೆ ಮಾತನಾಡಬಾರದೆಂದು ಮೊಬೈಲ್ ಫೋನ್ ಕಿತ್ತುಕೊಂಡಿದ್ದ ಎಂದು ಶ್ರೀನಿಧಿ ಕುಟುಂಬಸ್ಥರು ಆರೋಪಿಸಿದ್ದಾರೆ. ಗಂಡ, ಅತ್ತೆ ಹಾಗೂ ಇನ್ನಿಬ್ಬರೂ ಸಂಬಂಧಿಕರ ವಿರುದ್ಧ ಶ್ರೀನಿಧಿ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾರೆ. ಘಟನೆ ಸಂಬಂಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಮಧ್ಯಪ್ರಾಚ್ಯ ದೇಶಗಳ ಯುದ್ಧದ ಎಫೆಕ್ಟ್: ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ

