ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು (Bail) ಕರ್ನಾಟಕ ಹೈಕೋರ್ಟ್‌ನ (Karnataka Highcourt) ಏಕಸದಸ್ಯ ಪೀಠ ವಜಾಗೊಳಿಸಿದೆ.
ಈ ಪ್ರಕರಣದಲ್ಲಿ ಆರೋಪಿಗಳಾದ ಪ್ರಶಾಂತ್ ತಲ್ವಾರ್, ಚಂದ್ರಶೇಖರ್ ಹಾಗೂ ನಿಂಗರಾಜ್ ಗುಲಾಪ್ಪ ತಲ್ವಾರ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದಕ್ಕೂ ಮೊದಲು ಸೆಷನ್ಸ್ ಕೋರ್ಟ್ ಕೂಡ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಸೆಷನ್ಸ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ತ್ರಿಪುರ ಮಾಜಿ ಸಿಎಂ ಜೊತೆ ‘ಟಗರು’ ಖ್ಯಾತಿಯ ನಟಿ ತ್ರಿವೇಣಿ ರಾವ್ ಮದುವೆ
‘ಡೆವಿಲ್’ ಚಿತ್ರದ ಪ್ರಚಾರದ ಸಂದರ್ಭದಲ್ಲಿ ವಿಜಯಲಕ್ಷ್ಮಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳನ್ನು ಹಾಕಿರುವ ಆರೋಪ ಈ ಮೂವರ ವಿರುದ್ಧ ಕೇಳಿಬಂದಿತ್ತು. ಘಟನೆಗೆ ಸಂಬಂಧಿಸಿ ವಿಜಯಲಕ್ಷ್ಮಿ ಅವರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ದೂರು ನೀಡಿದ್ದರು. ಅವರ ದೂರಿನ ಆಧಾರದಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ – ಹೊಸ ಮುಖಗಳ ಸೇರ್ಪಡೆಗೆ ಡಿಕೆಶಿ ಸುಳಿವು
ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಮಹಿಳೆಯರ ವಿರುದ್ಧ ಇಂತಹ ಅಶ್ಲೀಲ ಮತ್ತು ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡುವುದು ಕ್ಷಮಿಸಲಾಗದ ಕೃತ್ಯ ಎಂದು ಕೋರ್ಟ್ ತಿಳಿಸಿದೆ. ಅಭಿವ್ಯಕ್ತಿ ಸ್ವಾತಂತ್ರ‍್ಯವು ಸಂವಿಧಾನ ನೀಡಿರುವ ಮೂಲಭೂತ ಹಕ್ಕಾಗಿದ್ದರೂ, ಅದಕ್ಕೆ ತನ್ನದೇ ಆದ ಮಿತಿಗಳು ಮತ್ತು ನಿರ್ಬಂಧಗಳಿದ್ದು, ಅವುಗಳನ್ನು ಮೀರುವುದು ಅಪರಾಧವಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ಮೊದಲ ಬಾರಿಗೆ ಅಧಿಕಾರ ಹಂಚಿಕೆ ಬಗ್ಗೆ ಗುಟ್ಟು ಬಿಚ್ಚಿಟ್ಟ ಡಿಕೆಶಿ
ಇದೇ ವೇಳೆ, ಆಧಾರರಹಿತ, ಸುಳ್ಳು ಹಾಗೂ ಬೆದರಿಕೆಯ ಸ್ವರೂಪದ ಸಂದೇಶಗಳನ್ನು ಸಾಮಾಜಿಕ ಜಾಲತಾಣ ಸಂಸ್ಥೆಗಳೇ ನಿಯಂತ್ರಿಸುವ ಜವಾಬ್ದಾರಿ ಹೊಂದಿವೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಸಾರ್ವಜನಿಕ ಹಕ್ಕುಗಳು ಹಾಗೂ ಸಮಾಜದ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ನ್ಯಾಯಾಲಯಗಳು ಅಗತ್ಯ ಕ್ರಮ ಕೈಗೊಳ್ಳುತ್ತವೆ ಎಂದು ತಿಳಿಸಿದ ಹೈಕೋರ್ಟ್, ಆರೋಪಿಗಳ ಜಾಮೀನು ಅರ್ಜಿಗಳನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಖಾದರ್ ಕಳೆದ ಬಾರಿಯೇ ಮಂತ್ರಿ ಆಗ್ಬೇಕಿತ್ತು, ಆದ್ರೆ ತ್ಯಾಗ ಮಾಡಿದ್ರು: ಸಿಎಂ ಡಿಕೆ ಶಿವಕುಮಾರ್

