Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
Last updated: April 21, 2026 4:03 pm
Public TV
Share
2 Min Read
Operation Sindoor 1
SHARE

-ನ್ಯಾಯ ದೊರಕಿದೆ, ಭಾರತ ಒಗ್ಗಟ್ಟಿನಿಂದ ನಿಂತಿದೆ: ಸೇನೆಯಿಂದ ಪೋಸ್ಟ್

ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ (ಏ.22) ಒಂದು ವರ್ಷ. ಈ ದುರಂತದ ದಿನದಂದು ಹಲವರು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದು, ಭಾರತೀಯ ಸೇನೆ `ಆಪರೇಷನ್ ಸಿಂಧೂರ’ವನ್ನು (Operation Sindoor) ನೆನಪಿಸಿ, ಸಂದೇಶವೊಂದನ್ನು ನೀಡಿದೆ.

2025ರ ಏ.22 ಭಾರತಕ್ಕೆ ಕರಾಳ ದಿನ. ಪಹಲ್ಗಾಮ್‌ನಲ್ಲಿರುವ (Pahalgam) ಬೈಸರನ್ ವ್ಯಾಲಿಗೆ (Baisaran Valley) ಪ್ರವಾಸಕ್ಕೆಂದು ತೆರಳಿದ್ದವರ ಪೈಕಿ 26 ಜನರು ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಭಾರತೀಯ ಸೇನೆ (Indian Army) ಪಾಕ್‌ನ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿ ಸೇಡು ತೀರಿಸಿಕೊಂಡಿತ್ತು. ಇದೀಗ ಭಾರತೀಯ ಸೇನೆ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು, ಹಿಂದೂಗಳ ನರಮೇಧ ನಡೆಸಿದವರ ಜೀವ ತೆಗೆದುಕೊಂಡು ನ್ಯಾಯ ದೊರಕಿಸಿಕೊಟ್ಟಿದ್ದೇವೆ. ಭಾರತ ಒಗ್ಗಟ್ಟಾಗಿದೆ ಎಂದು ಬಲವಾದ ಸಂದೇಶ ನೀಡಿದೆ. ಇದನ್ನೂ ಓದಿ: ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

When boundaries of humanity are crossed, the response is decisive.

Justice is Served.

India Stands United.#SindoorAnniversary #JusticeEndures #NationFirst pic.twitter.com/rtgYu9Hg11

— ADG PI – INDIAN ARMY (@adgpi) April 21, 2026

Pahalgam Terror Attack 2 1

ಮಾನವೀಯತೆ ಮಿತಿಗಳನ್ನು ಮೀರಿದಾಗ ಪ್ರತಿಕ್ರಿಯೆ ನಿರ್ಣಾಯಕವಾಗಿರುತ್ತದೆ. ಕೆಲ ಮಿತಿಗಳನ್ನು ಮೀರಿದಾಗ ದೇಶ ಒಗ್ಗಟ್ಟಾಗಿ ನಿಲ್ಲುತ್ತದೆ. ಭಯೋತ್ಪಾದನೆಯ ಹಿಂದಿರುವವರಿಗೆ ಎಚ್ಚರಿಕೆ ನೀಡಿ, ನಾಗರಿಕರಿಗೆ ಬೆನ್ನೆಲುಬಾಗಿರುತ್ತದೆ ಎಂದು ಆಪರೇಷನ್ ಸಿಂಧೂರವನ್ನು ನೆನಪಿಸಿಕೊಂಡಿದೆ.

ಒಂದು ವರ್ಷದ ಹಿಂದೆ ನಡೆದ ಘಟನೆಯಿಂದಾಗಿ ಕುಟುಂಬಗಳು ಇಂದಿಗೂ ನೋವಿನಲ್ಲಿವೆ. ಗಾಯ ಮಾಸಿದರೂ ಅದರಿಂದಾದ ನೋವು ಇಂದಿಗೂ ದುಃಖ ನೀಡುತ್ತಿದೆ. ಇದೆಲ್ಲದರ ಜೊತೆಗೆ ಕೆಲ ಕುಟುಂಬಗಳು ತಮ್ಮ ಪ್ರೀತಿಪಾತ್ರರ ನೆನಪುಗಳನ್ನು ಜೀವಂತವಾಗಿಟ್ಟುಕೊಂಡು ಜೀವನವನ್ನು ಪುನರ್ನಿರ್ಮಿಸಲು ಪ್ರಯತ್ನಿಸುತ್ತಿದ್ದಾರೆ.

Pahalgam Terrorist Attack 1

ಆ ದಿನ ಏನಾಯ್ತು?
ಅಂದು ಏ.22, ಕನ್ನಡಿಗರು ಸೇರಿದಂತೆ ಹಲವಾರು ಜನರು ಪಹಲ್ಗಾಮ್‌ನ ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ತೆರಳಿದ್ದರು. ಈ ವೇಳೆ ಏಕಾಏಕಿ ಭಯೋತ್ಪಾದಕರು ದಾಳಿ ನಡೆಸಿ, ಅಲ್ಲಿದ್ದವರಿಗೆ ಕಲಿಮಾ ಬರುತ್ತದೆಯಾ ಎಂದು ಕೇಳಿ ಹಿಂದೂಗಳನ್ನು ಸಾಲಾಗಿ ನಿಲ್ಲಿಸಿ ಗುಂಡಿಕ್ಕಿ ಕೊಂದ್ದಿದ್ದರು.

ಮೂವರು ಭಯೋತ್ಪಾದಕರು ಪ್ರವಾಸಿಗರನ್ನು ಒಟ್ಟುಗೂಡಿಸಿ ಪುರುಷ ಮತ್ತು ಮಹಿಳಾ ಗುಂಪುಗಳಾಗಿ ವಿಂಗಡಿಸಿದ್ದರು. ಸೇನಾ ಸಮವಸ್ತ್ರದಲ್ಲಿ ಬಂದ ಉಗ್ರರನ್ನು ನೋಡಿ ಪ್ರವಾಸಿಗರು ಇವರು ಸೈನಿಕರು ಎಂದೇ ಭಾವಿಸಿದ್ದರು. ಸುಮಾರು 20 ನಿಮಿಷ ಸ್ಥಳದಲ್ಲಿ ಇದ್ದ ಉಗ್ರರು ಹಿಂದೂಗಳನ್ನು ಸಾಲಾಗಿ ನಿಲ್ಲಿಸಿ ಹತ್ಯೆ ಮಾಡಿದ್ದರು. ಈ ವೇಳೆ ಕೆಲವರು ಓಡಿ ಹೋಗಲು ಯತ್ನಿಸಿದಾಗ ಅವರ ಮೇಲೂ ಶೂಟ್ ಮಾಡಿದ್ದರು.

Pahalgam terror attack

ದಾಳಿಯಿಂದ ಪಾರಾಗಲು ಪ್ರವಾಸಿಗರು ಡೇರೆಗಳಲ್ಲಿ ಅಡಗಿ ಕುಳಿತಿದ್ದರು. ಈ ಡೇರೆಗೆ ಬಂದ ಉಗ್ರರು ಪುರುಷರನ್ನು ಕರೆದು ನಿನ್ನ ಧರ್ಮ ಯಾವುದು? ಕಲಿಮಾ ಹೇಳು ಎಂದು ಕೇಳಿದ್ದರು. ಕಲಿಮಾ ಹೇಳದ್ದಕ್ಕೆ ಹಾಗೂ ಪ್ರವಾಸಿಗರ ಗುರುತಿನ ಚೀಟಿಗಳನ್ನು ಪರಿಶೀಲಿಸಿ, ಮುಸ್ಲಿಮೇತರರೆಂದು ಗುರುತಿಸಿ ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಒಂದು ಅಂಗವಾದ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ದಾಳಿಯ ನಂತರ, ಭದ್ರತಾ ಪಡೆಗಳು ಸ್ಥಳಕ್ಕೆ ಆಗಮಿಸಿ, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಿದರು. ಪಹಲ್ಗಾಮ್ ದಾಳಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು.

TAGGED:Baisaran Valleyindian armynewdelhiOperation SindoorPahalgam Attackterrorist attackಆಪರೇಷನ್‌ ಸಿಂಧೂರನವದೆಹಲಿಪಹಲ್ಗಾಮ್ ದಾಳಿಬೈಸರನ್ ವ್ಯಾಲಿಭಯೋತ್ಪಾದಕ ದಾಳಿಭಾರತೀಯ ಸೇನೆ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Horse Rider
Latest

ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Public TV
By Public TV
7 minutes ago
Zameer Ahmed Khan
Bengaluru City

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
1 hour ago
UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
1 hour ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
2 hours ago
Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
2 hours ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?