Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: CET ಪರೀಕ್ಷೆಗೆ ಕೆಇಎ ಸಿದ್ಧತೆ – ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | CET ಪರೀಕ್ಷೆಗೆ ಕೆಇಎ ಸಿದ್ಧತೆ – ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ

Bengaluru City

CET ಪರೀಕ್ಷೆಗೆ ಕೆಇಎ ಸಿದ್ಧತೆ – ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ

Public TV
Last updated: April 21, 2026 4:49 pm
Public TV
Share
4 Min Read
kea
SHARE

ಬೆಂಗಳೂರು: ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ಸಿಇಟಿ ಪರೀಕ್ಷೆ ಸಿದ್ಧತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿದ್ಧತೆ ಮಾಡಿಕೊಂಡಿದೆ.

2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಏಪ್ರಿಲ್ 23 ಮತ್ತು 24 ರಂದು ನಡೆಯಲಿದ್ದು, ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.ಇದನ್ನೂ ಓದಿ: CET 2026 – ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

ಹುಡುಗರು 1,44,380, ಹುಡುಗಿಯರು 1,86,099 ಹಾಗೂ ವಿಶೇಷ ಚೇತನರು 970 ಸೇರಿದಂತೆ ಒಟ್ಟು 3,30,479 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಒಟ್ಟು 745 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಉಪ ಮುಖ್ಯ ಅಧೀಕ್ಷರು 745, ವಸ್ತ್ರ ಸಂಹಿತಾಧಿಕಾರಿ, 745, ಪರೀಕ್ಷಾ ಕೇಂದ್ರದ ಸಿಬ್ಬಂದಿ 12,665, ಕೊಠಡಿ ಮೇಲ್ವಿಚಾರಕರು 13,770, ಫ್ರಿಸ್ಕಿಂಗ್ ದಳ 3,304, ಮುಖ ಚಹರೆ ದಳ 3,304 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಒಟ್ಟು 15,265 ಸಿಸಿಟಿವಿ ಕ್ಯಾಮರಾ ಇರಲಿವೆ.

ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಏಪ್ರಿಲ್ 22ರಂದು ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆಯಲಿದೆ. ಏ.23ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಹಾಗೂ ಏ.24ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ನೇಮಕಾತಿ ಪರೀಕ್ಷೆಗಳಿಗೆ ಮಾಡುವ ಹಾಗೆ ಈ ಪರೀಕ್ಷೆಗೂ ಕ್ಯಾಮರಾ ಕಣ್ಗಾವಲು ಇರುತ್ತದೆ. ವೆಬ್ ಕಾಸ್ಟಿಂಗ್ ಮೂಲಕ ಎಲ್ಲ 745 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡುವ ವ್ಯವಸ್ಥೆ ಮಾಡಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ ನಡೆಸಲಿದ್ದಾರೆ.

ಬೆಂಗಳೂರಿನ 163 ಕೇಂದ್ರಗಳಲ್ಲಿ ಅತಿ ಹೆಚ್ಚು ಅಂದರೆ ಒಟ್ಟು 77,604 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇದರ ಕಮಾಂಡ್ ಸೆಂಟರ್ ಕೆಇಎ ಕಚೇರಿಯಲ್ಲಿ ಸ್ಥಾಪಿಸಲಾಗಿದೆ. ಒಟ್ಟು 970 ವಿಶೇಷ ಚೇತನ ಮಕ್ಕಳು ಸಿಇಟಿ ಬರೆಯುತ್ತಿದ್ದು, ಅವರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಶ್ರವಣ ಸಾಧನ ಬಳಸಿಕೊಂಡು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಬೇಕಾಗಿರುವ ಕಾರಣ ಅಂತಹವರು ಎರಡು ಗಂಟೆ ಮುಂಚಿತವಾಗಿ ಕೇಂದ್ರಕ್ಕೆ ಬರಬೇಕು. ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಕೂಡ ಅಳವಡಿಸಿದ್ದು, ಅಕ್ರಮಗಳಿಗೆ ಅವಕಾಶ ಇಲ್ಲದಂತೆ ನಿಗಾ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಇದನ್ನೂ ಓದಿ: ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

ಅಭ್ಯರ್ಥಿಗಳನ್ನು ತೀವ್ರ ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರದೊಳಗೆ ಬಿಡುವ ಕಾರಣಕ್ಕೆ ಕನಿಷ್ಠ ಎರಡು ಗಂಟೆ ಮುಂಚಿತವಾಗಿ ಅವರು ಪರೀಕ್ಷಾ ಕೇಂದ್ರಕ್ಕೆ ಹೋಗಬೇಕು. ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಕೋಡ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗುತ್ತದೆ. ಯಾರದ್ದೊ ಪರೀಕ್ಷೆಯನ್ನು ಇನ್ಯಾರೊ ಬರೆಯುವುದನ್ನು ತಡೆಯುವ ಉದ್ದೇಶದಿಂದ ಈ ವ್ಯವಸ್ಥೆ ಜಾರಿ ಮಾಡಿದ್ದು, ಸೀಟು ಹಂಚಿಕೆಯಾಗಿ ಕಾಲೇಜುಗಳಿಗೆ ಪ್ರವೇಶ ಆಗುವ ಸಂದರ್ಭದಲ್ಲಿ ಕೂಡ ಅಭ್ಯರ್ಥಿಯ ಭಾವಚಿತ್ರವನ್ನು ಹೋಲಿಕೆ ಮಾಡಿಯೇ ಪ್ರವೇಶ ನೀಡುವ ವ್ಯವಸ್ಥೆ ಮಾಡಿದ್ದು, ನಕಲಿ ಅಭ್ಯರ್ಥಿಗಳಿಗೆ ಸಂಪೂರ್ಣ ಕಡಿವಾಣ ಹಾಕಲಾಗಿದೆ. ಕಷ್ಟಪಟ್ಟು ಓದಿದ ಅಭ್ಯರ್ಥಿಗಳಿಗೆ ಯಾವುದೇ ಮೋಸ ಆಗಲು ಬಿಡುವುದಿಲ್ಲ. ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದು, ನಿಶ್ಚಿಂತೆಯಿಂದ ಪರೀಕ್ಷೆ ಬರೆಯಬಹುದು ಎಂದು ಕೆಇಎ ಅಭಯ ನೀಡಿದೆ.

ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ಅಥವಾ ಅನುತ್ತೀರ್ಣರಾಗಿರುವವರಿಗೆ ಇನ್ನೂ ಫಲಿತಾಂಶವನ್ನು ಉತ್ತಮ ಮಾಡಿಕೊಳ್ಳಲು ಅವಕಾಶ ಇರುವ ಕಾರಣ ಯಾರೂ ಸಿಇಟಿ ಬರೆಯುವುದನ್ನು ತಪ್ಪಿಸಿಕೊಳ್ಳಬಾರದು. ಹೀಗಾಗಿ ಯಾರೆಲ್ಲ ಶುಲ್ಕ ಪಾವತಿಸಿದ್ದೀರೊ ಅವರೆಲ್ಲರೂ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆ ಬರೆಯಬೇಕು. ಎರಡನೇ ಪರೀಕ್ಷೆಯ ಅಂಕಗಳನ್ನು ಕೂಡ ಸಿಇಟಿ ಫಲಿತಾಂಶಕ್ಕೆ ಪರಿಗಣಿಸಲಾಗುವುದು. ವಸ್ತ್ರಸಂಹಿತೆ ವಿಚಾರವಾಗಿ ಅನಗತ್ಯ ಗೊಂದಲ ತಪ್ಪಿಸಲು ಇದೇ ಮೊದಲ ಬಾರಿಗೆ ಪ್ರತಿ ಕೇಂದ್ರಕ್ಕೆ ಒಬ್ಬ ವಸ್ತ್ರ ಸಂಹಿತೆ ಅಧಿಕಾರಿಯನ್ನು ನೇಮಿಸಲಾಗಿದೆ.

ಪುರುಷ/ಮಹಿಳಾ ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆ ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ಇಲ್ಲದಿರುವುದನ್ನು ಹಾಕಿಕೊಂಡು ಬಂದರೆ ಉತ್ತಮ. ಪುರುಷರು, ಜೇಬು ಇಲ್ಲದ/ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಬೇಕು. ಕುರ್ತಾ ಪೈಜಾಮ/ಜೀನ್ಸ್ ಪ್ಯಾಂಟ್‌ಗೆ ಅವಕಾಶ ಇರುವುದಿಲ್ಲ. ಶೂ ಕೂಡ ನಿಷೇಧಿಸಲಾಗಿದೆ. ಮೊಬೈಲ್, ಬ್ಲೂಟೂತ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ಒಮ್ಮೆ ಕೆಇಎ ವೆಬ್‌ಸೈಟ್‌ನಲ್ಲಿ ಇರುವ ವಸ್ತ್ರಸಂಹಿತೆಯ ವಿವರಗಳನ್ನು ಓದಿಕೊಂಡು, ಆ ಪ್ರಕಾರ ಪರೀಕ್ಷೆಗೆ ಬರಬೇಕು. ಓಎಂಆರ್ ಶೀಟ್‌ನಲ್ಲಿ ಅಭ್ಯರ್ಥಿಗಳು ತಮ್ಮ ಸ್ವವಿವರಗಳನ್ನು ಯಾವುದೇ ತಪ್ಪಿಲ್ಲದೆ ದಾಖಲಿಸಬೇಕು. ಅಭ್ಯರ್ಥಿಯ ಹೆಸರು, ಸಿಇಟಿ ಸಂಖ್ಯೆ, ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ ಮತ್ತು ಪ್ರಶ್ನೆಪತ್ರಿಕೆಯ ಕ್ರಮ ಸಂಖ್ಯೆಯನ್ನು ಸರಿಯಾಗಿ ನಮೂದಿಸಿ, ಸಂಬಂಧಿಸಿದ ವೃತ್ತಗಳನ್ನು ಶೇಡ್ ಮಾಡಬೇಕು. ಈ ಹಿಂದೆ ಈ ಮಾಹಿತಿ ಕೂಡ ಸರಿಯಾಗಿ ಭರ್ತಿ ಮಾಡದಿರುವ ಕಾರಣ ಫಲಿತಾಂಶ ಪ್ರಕಟಣೆಗೂ ಸಮಸ್ಯೆ ಆಗಿತ್ತು. ಹೀಗಾಗಿ ಅಭ್ಯರ್ಥಿಗಳು ಎಚ್ಚರವಹಿಸಬೇಕು.

ಅಭ್ಯಾಸ ಮಾಡಲಿ ಎನ್ನುವ ಕಾರಣಕ್ಕೆ ಕರಡು ಓಎಂಆರ್ ಸೀಟ್ ಕೂಡ ಪ್ರವೇಶ ಪತ್ರದ ಜೊತೆ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಿದ್ದು, ಅದನ್ನು ಅಭ್ಯಾಸ ಮಾಡುವುದರ ಮೂಲಕ ಅನಗತ್ಯ ತಪ್ಪುಗಳನ್ನು ತಡೆಯಬೇಕು ಅಂತ ಕೆಇಎ ತಿಳಿಸಿದೆ.ಇದನ್ನೂ ಓದಿ: ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

TAGGED:2nd pucbengaluruCET 2026CET ExamKarnataka Examination AuthorityKEAಕೆಇಎದ್ವಿತೀಯ ಪಿಯುಸಿಬೆಂಗಳೂರುಸಿಇಟಿ ಪರೀಕ್ಷೆಸಿಇಟಿ-2026
Share This Article
Facebook Whatsapp Whatsapp Telegram

Cinema news

ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories

You Might Also Like

AshwiniVaishnaw
Dharwad

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್ ಆದೇಶ

Public TV
By Public TV
21 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ʻವಿದ್ಯಾಪೀಠʼಕ್ಕೆ ಬನ್ನಿ – On Spot ಬಂಪರ್‌ ಬಹುಮಾನ ನಿಮ್ಮದಾಗಿಸಿಕೊಳ್ಳಿ

Public TV
By Public TV
24 minutes ago
Supreme Court 1
Karnataka

ಮುರುಘಾ ಮಠದ ಆಸ್ತಿ ಕೇಸ್ – ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್

Public TV
By Public TV
33 minutes ago
AS Ponnanna
Districts

ಕೊಡಗಿನ ಹೋಂ ಸ್ಟೇಯಲ್ಲಿ ವಿದೇಶಿ ಮಹಿಳೆ ರೇಪ್ ಆರೋಪ – ಇಬ್ಬರನ್ನು ಬಂಧಿಸಲಾಗಿದೆ: ಪೊನ್ನಣ್ಣ

Public TV
By Public TV
57 minutes ago
Nikhil Kumaraswamy
Bengaluru City

ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಿದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
Delhi Police
Crime

ಹಿರಿಯ ಕಂದಾಯ ಅಧಿಕಾರಿ ಮಗಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ – ಮನೆಗೆಲಸದವನ ಮೇಲೆ ಶಂಕೆ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?