Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಎಂಕೆ, ಎಐಎಡಿಎಂಕೆ ಮಧ್ಯೆ ನೇರ ಫೈಟ್ – ಸಂಚಲನ ಮೂಡಿಸಲಿದ್ದಾರಾ ವಿಜಯ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಡಿಎಂಕೆ, ಎಐಎಡಿಎಂಕೆ ಮಧ್ಯೆ ನೇರ ಫೈಟ್ – ಸಂಚಲನ ಮೂಡಿಸಲಿದ್ದಾರಾ ವಿಜಯ್?

Latest

ಡಿಎಂಕೆ, ಎಐಎಡಿಎಂಕೆ ಮಧ್ಯೆ ನೇರ ಫೈಟ್ – ಸಂಚಲನ ಮೂಡಿಸಲಿದ್ದಾರಾ ವಿಜಯ್?

Public TV
Last updated: April 22, 2026 5:59 pm
Public TV
Share
3 Min Read
Tamil Nadu Election 2026 Tomorrow DMK AIDMK Congress BJP TVK Vijay
SHARE

– ತಮಿಳುನಾಡು ವಿಧಾನಸಭೆ ಚುನಾವಣೆ ; ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ (Tamilnadu Election) ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಸರ್ಕಾರ ರಚನೆಗೆ ಕನಿಷ್ಠ 118 ಸ್ಥಾನಗಳು ಅಗತ್ಯವಿದ್ದು ತ್ರೀಕೋನ ಸ್ಪರ್ಧೆ ಏರ್ಪಟ್ಟಿದೆ.

ಚುನಾವಣೆಯು ಡಿಎಂಕೆ (DMK) ಮತ್ತು ಕಾಂಗ್ರೆಸ್ (Congress) ನೇತೃತ್ವದ INDIA ಒಕ್ಕೂಟ ಮತ್ತು ಎಐಎಡಿಎಂಕೆ (AIADMK) ಮತ್ತು ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) ಒಕ್ಕೂಟದ ನಡುವೆ ನೇರ ಸ್ಪರ್ಧೆ ನಡೆಯಲಿದೆ. ಇದೇ ಮೊದಲ ಬಾರಿಗೆ ತಮಿಳು ಸೂಪರ್ ಸ್ಟಾರ್ ಟಿವಿಕೆ ಪಕ್ಷ ಕಟ್ಟಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. 234 ವಿಧಾನಸಭಾ ಕ್ಷೇತ್ರಗಳಲ್ಲಿ 4,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೇ 4ರಂದು ಪಂಚರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯದಲ್ಲಿ ಅಂದಾಜು 6.2 ಕೋಟಿ ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ. ಇವರಲ್ಲಿ ಸುಮಾರು 3.1 ಕೋಟಿ ಮಹಿಳಾ ಮತದಾರರು ಹಾಗೂ 3 ಕೋಟಿ ಪುರುಷ ಮತದಾರರು ಇದ್ದಾರೆ. ಒಟ್ಟು 88,000ಕ್ಕೂ ಹೆಚ್ಚು ಮತಗಟ್ಟೆಗಳು ಸ್ಥಾಪನೆಯಾಗಿದ್ದು, ಪ್ರತಿ ಮತಗಟ್ಟೆಯಲ್ಲಿ ಸರಾಸರಿ 800–900 ಮತದಾರರು ಮತ ಚಲಾಯಿಸಲಿದ್ದಾರೆ.

ಪ್ರತಿ ಕ್ಷೇತ್ರದಲ್ಲಿ ಸರಾಸರಿ 12–15 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಕೆಲವು ಕ್ಷೇತ್ರಗಳಲ್ಲಿ ಇದು 20ಕ್ಕಿಂತ ಹೆಚ್ಚು ಮಂದಿ ಕಣದಲ್ಲಿದ್ದಾರೆ. ಭದ್ರತಾ ಮತ್ತು ಮೇಲ್ವಿಚಾರಣೆ ವ್ಯವಸ್ಥೆಗೆ ಸುಮಾರು 1.5 ಲಕ್ಷಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆಗೊಂಡಿದ್ದು, 20,000ಕ್ಕೂ ಹೆಚ್ಚು ಸಂವೇದನಾಶೀಲ ಮತಗಟ್ಟೆಗಳಲ್ಲಿ ಹೆಚ್ಚುವರಿ ಪೊಲೀಸ್ ಕಾವಲು ಏರ್ಪಡಿಸಲಾಗಿದೆ. ಸುಮಾರು 45,000 ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿಗಾವಹಿಸಲಾಗುತ್ತದೆ.

ಚುನಾವಣಾ ಕಣದಲ್ಲಿರುವ ಪ್ರಮುಖ ಪಕ್ಷಗಳು ಮತದಾರರನ್ನು ಸೆಳೆಯಲು ಭರಪೂರ ಕೊಡುಗೆಗಳನ್ನು ಘೋಷಿಸಿವೆ. ಆಡಳಿತಾರೂಢ ಡಿಎಂಕೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಮುಂದುವರಿಕೆ, ಶಿಕ್ಷಣ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡುವ ಭರವಸೆ ನೀಡಿದೆ. ಮತ್ತೊಂದೆಡೆ ಎಐಎಡಿಎಂಕೆ ನೇರ ನಗದು ವರ್ಗಾವಣೆ, ಅಗತ್ಯ ವಸ್ತುಗಳ ಮೇಲಿನ ಸಬ್ಸಿಡಿ ಮತ್ತು ಕಾನೂನು ಸುವ್ಯವಸ್ಥೆಯ ಸುಧಾರಣೆಯ ವಾಗ್ದಾನ ಮಾಡಿದೆ. ಈ ನಡುವೆ, ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಯುವಜನತೆಗೆ ಉದ್ಯೋಗದ ಭರವಸೆಯೊಂದಿಗೆ ನಟ ವಿಜಯ್ ಕಣಕ್ಕಿಳಿದಿದ್ದು, ಅತಂತ್ರ ಅಥವಾ ಜಿದ್ದಾಜಿದ್ದಿನ ಪೈಪೋಟಿ ಇರುವ ಕ್ಷೇತ್ರಗಳಲ್ಲಿ ಇವರ ಮತ ಹಂಚಿಕೆ ನಿರ್ಣಾಯಕವಾಗುವ ಸಾಧ್ಯತೆಯಿದೆ.

ತಮಿಳುನಾಡಿನ ರಾಜಕಾರಣದಲ್ಲಿ ಯಾವಾಗಲೂ ಮಹಿಳೆಯರು ಮತ್ತು ಯುವ ಮತದಾರರು ಕಿಂಗ್ ಮೇಕರ್‌ಗಳಾಗಿ ಹೊರಹೊಮ್ಮಿದ್ದಾರೆ. ಈ ಬಾರಿಯೂ ಮಹಿಳಾ ಮತದಾರರನ್ನು ಸೆಳೆಯಲು ಗ್ಯಾಸ್ ಸಿಲಿಂಡರ್ ಸಬ್ಸಿಡಿ ಮತ್ತು ಆರ್ಥಿಕ ನೆರವಿನಂತಹ ಯೋಜನೆಗಳನ್ನು ಪಕ್ಷಗಳು ಘೋಷಿಸಿವೆ. ಹೊಸ ಮತದಾರರನ್ನು ಸೆಳೆಯಲು ಸೋಷಿಯಲ್ ಮೀಡಿಯಾ ಮತ್ತು ಡಿಜಿಟಲ್ ಪ್ರಚಾರವನ್ನು ಅತೀ ಹೆಚ್ಚಾಗಿ ಬಳಸಿಕೊಳ್ಳಲಾಗಿದೆ. ಮತದಾನದ ಪ್ರಮಾಣ ಹೆಚ್ಚಾದಷ್ಟು ಫಲಿತಾಂಶದಲ್ಲಿ ಅಚ್ಚರಿಗಳು ಕಾದಿರಬಹುದು ಎನ್ನಲಾಗುತ್ತಿದೆ. ಮಹಿಳೆಯರ ಬೆಂಬಲ ಯಾರಿಗೆ ಸಿಗಲಿದೆ? ನಟ ವಿಜಯ್‌ ಸಿನಿಮಾರಂಗದಂತೆ ರಾಜಕೀಯದಲ್ಲೂ ಮಿಂಚುತ್ತಾರಾ? ಎಂಬ ಪ್ರಶ್ನೆಗೆ ಮೇ 4 ರಂದು ಉತ್ತರ ಸಿಗಲಿದೆ.

ಈ ಚುನಾವಣೆಯು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಮತ್ತು ವಿರೋಧ ಪಕ್ಷವಾದ ಎಐಎಡಿಎಂಕೆ ನಡುವಿನ ನೇರ ಹಣಾಹಣಿಯಂತೆ ಮೇಲ್ನೋಟಕ್ಕೆ ಕಂಡರೂ, ನಟ ವಿಜಯ್ ಅವರ ರಾಜಕೀಯ ಪ್ರವೇಶವು ಹೊಸ ಸಂಚಲನ ಮೂಡಿಸಿದೆ. ಪ್ರಮುಖವಾಗಿ ನಗರ ಪ್ರದೇಶದ ಯುವ ಮತದಾರರು ಮತ್ತು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರ ಮೇಲೆ ವಿಜಯ್ ಅವರ ಪ್ರಭಾವ ಎಷ್ಟಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಡಿಎಂಕೆ ತನ್ನ ಸಮಾಜ ಕಲ್ಯಾಣ ಯೋಜನೆಗಳು ಮತ್ತು ಸಾಮಾಜಿಕ ನ್ಯಾಯದ ಅಜೆಂಡಾವನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿದ್ದರೆ, ಎಐಎಡಿಎಂಕೆ ಆಡಳಿತ ವಿರೋಧಿ ಅಲೆ ಮತ್ತು ಕೇಂದ್ರದ ಮೈತ್ರಿ ಪಕ್ಷಗಳ ಬೆಂಬಲದ ಮೇಲೆ ವಿಶ್ವಾಸ ಇರಿಸಿದೆ.

TAGGED:congressDMKelectionTamilnadu Electionಕಾಂಗ್ರೆಸ್ಚುನಾವಣೆಡಿಎಂಕೆತಮಿಳುನಾಡುಬಿಜೆಪಿವಿಜಯ್
Share This Article
Facebook Whatsapp Whatsapp Telegram

Cinema news

ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories

You Might Also Like

is royal challengers bengaluru player can play for chennai super kings under ipl loan rule
Cricket

ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?

Public TV
By Public TV
21 minutes ago
011
Cricket

Explainer | ವೈಟ್‌ ಬಾಲ್‌ ಕ್ರಿಕೆಟ್‌ – ಟೀಂ ಇಂಡಿಯಾ ನಾಯಕತ್ವಕ್ಕೆ ಹೆಚ್ಚಿದ ಕೂಗು, ಅಯ್ಯರ್‌ಗೆ ಹೆಚ್ಚಿನ ಬೆಂಬಲ!

Public TV
By Public TV
22 minutes ago
epaminondas ship IRGC
Latest

ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಐಆರ್‌ಜಿಸಿ

Public TV
By Public TV
27 minutes ago
AshwiniVaishnaw
Dharwad

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್ ಆದೇಶ

Public TV
By Public TV
1 hour ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ʻವಿದ್ಯಾಪೀಠʼಕ್ಕೆ ಬನ್ನಿ – On Spot ಬಂಪರ್‌ ಬಹುಮಾನ ನಿಮ್ಮದಾಗಿಸಿಕೊಳ್ಳಿ

Public TV
By Public TV
1 hour ago
Supreme Court 1
Karnataka

ಮುರುಘಾ ಮಠದ ಆಸ್ತಿ ಕೇಸ್ – ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?